ಹಂಪಾ ನಾಗರಾಜಯ್ಯರಿಂದ ದಸರಾ ಉದ್ಘಾಟನೆ: ಸಿಎಂ
ಸಂಜೆವಾಣಿ ನ್ಯೂಸ್
ಮೈಸೂರು: ಸೆ.21:- ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ನಾನು ಖ್ಯಾತ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಆಯ್ಕೆಮಾಡಿದ್ದೇನರ. ಅವರಿಗೆ ದಸರಾ ಉದ್ಘಾಟನೆಗೆ ಆಹ್ವಾನ ನೀಡಲಾಗುವುದು ಎಂದು ಹೇಳಿದರು.
ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ನನ್ನನ್ನು ಭೇಟಿ ಮಾಡಿದ ಒಕ್ಕಲಿಗ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಗೆಜೆಟೆಡ್ ಪೆÇ್ರಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದರು. ಕಾನ್ ಸ್ಟಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದರು.
ಗಣಪತಿ ವಿಸರ್ಜನೆ ವೇಳೆ ಗಲಾಟೆಗೆ ಬಿಜೆಪಿ ಕಾರಣ:
ಬಿಜೆಪಿ ಅವರು ಕೋಮು ಗಲಭೆಗಳಿಗೆ ಪ್ರಚೋದನೆ ನೀಡುತ್ತಿರುವುದರಿಂದ ಗಣೇಶ ವಿಸರ್ಜನೆ ವೇಳೆ ಗಲಾಟೆಗಳು ನಡದಿವೆ.ಈ ಗಲಾಟೆಗಳಿಗೆ ಬಿಜೆಪಿಯವರೆ ಕಾರಣ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಗ್ದಾಳಿ ನಡೆಸಿದರು.
ರಾಜ್ಯದಲ್ಲಿ ನಾಗಮಂಗಲ ಮತ್ತು ದಾವಣಗೆರೆ ಎರಡು ಕಡೆಗಳಲ್ಲಿ ಮಾತ್ರ ಗಲಾಟೆ ನಡೆದಿದೆ. ಈ ಬಾರಿ ಅರವತ್ತು ಸಾವಿರ ಗಣೇಶಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೆÇಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ ಎಂದರು.
ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಇದಕ್ಕೆ ಬಿಜೆಪಿ ಕಾರಣ ಎಂದು ಮುಖ್ಯಮಂತ್ರಿಗಳು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ 2021 ರಿಂದ ಲೋಕಾಯುಕ್ತದವರು ತನಿಖೆ ನಡೆಸದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ, ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು.
ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆಯೇ ಎಂಬ ಮಾಧ್ಯಮದವರ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿ, ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡಿಲ್ಲ. ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಮಾಡುವವರಾಗಿದ್ದು, ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು ಎಂದು ಹೇಳಿದರು.