ಕೆಸ್ತೂರು ಕೊಪ್ಪಲು ಸ ಹಿ.ಪ್ರಾ ಶಾಲೆ ತಾಲ್ಲೂಕು ಮಟ್ಟದ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ
ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಸೆ.21:– ಜೀವನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುತ್ತದೆ ಕ್ರೀಡೆಗಳನ್ನು ಆಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ನೈತಿಕತೆ, ಮೌಲ್ಯಗಳು, ಶಿಸ್ತು ಮತ್ತು ಪರಸ್ಪರ ನಂಬಿಕೆಯ ಪ್ರಜ್ಞೆಯನ್ನು ಕಲಿಸುತ್ತದೆ ಎಂದು ಮುಖ್ಯ ಶಿಕ್ಷಕ ಡಿ.ಎಸ್.ಗೋವಿಂದ್ ಹೇಳಿದರು.
ಕೆಸ್ತೂರು ಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 2024-25ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟ ದ ಬಾಲಕಿಯರ ವಿಭಾಗದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಉತ್ತಮ ರೀತಿಯಲ್ಲಿ ಪ್ರದರ್ಶಿಸಿದ್ದು ಭಾಗವಹಿಸಿದ ವಿಧ್ಯಾರ್ಥಿಗಳಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಹ ಶಿಕ್ಷಕರು ಗಳಾದ ಎಲ್.ಆರ್.ಮಹೇಶ್, ಎಸ್.ಕೆ.ರೇಖಾ, ರಾಜೇಗೌಡ, ಮಹದೇವ, ಸಿ.ಪಿ.ಚೈತ್ರ, ಕೆ.ಎಂ.ರಕ್ಷಿತ್, ಎಸ್.ಎಂ.ಹರ್ಷಿತ್, ಕೆ.ಸ್ವಾಮಿ, ಎಸ್.ಡಿ.ಎಂ.ಸಿ ಅಧ್ಯಕ್ಷರು ಲೋಕೇಶ್, ಉಪಾಧ್ಯಕ್ಷ ರವಿಚಂದ್ರ ಸೇರಿದಂತೆ ಸದಸ್ಯರು ಗ್ರಾಮಸ್ಥರು ಅಭಿನಂದಿಸಿದರು.