ಪ್ರಧಾನಿ ಮೋದಿ ವಿಶ್ವ ಮಟ್ಟದಲ್ಲಿ ಭಾರತವನ್ನು ಎತ್ತರಕ್ಕೆ ಕೊಂಡೊಯ್ದಿದ್ದಾರೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ. 20- ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಉತ್ತಮ ಆಡಳಿತ ನೀಡುವ ಜೊತೆಗೆ ವಿಶ್ವ ಮಟ್ಟದಲ್ಲಿ ಭಾರತವನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಕೇಂದ್ರ ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಬಣ್ಣಿಸಿದರು.
ಅವರು ಪ್ರಧಾನಿ ನರೇಂದ್ರ ಮೋದಿ ಅವರ 74 ವರ್ಷದ ಹುಟ್ಟುಹಬ್ಬದ ಪ್ರಯುಕ್ತ ನಗರದ ಬಿಜೆಪಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ ಕಾರ್ಯಕ್ರಮದಕ್ಕೆ ಚಾಲನೆ ನೀಡಿ ಮಾತನಾಡಿ, ಮೋದಿಯವರು ಪ್ರಧಾನಿಯಾಗಿ ಉತ್ತಮ ಆಡಳಿತ ನೀಡುವ ಜೊತೆಗೆ ವಿಶ್ವ ಮಟ್ಟದಲ್ಲಿ ಭಾರತವನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ದೂರದೃಷ್ಟಿತ್ವ, ಭ್ರಷ್ಟಾಚಾರ ರಹಿತ ಆಡಳಿತ ದೇಶದ ಅಭಿವೃದ್ದಿಗೆ ಪೂರಕವಾಗಿದೆ ಎಂದರು.
ಕಾಡಾ ಮಾಜಿ ಅಧ್ಯಕ್ಷ ಜಿ. ನಿಜಗುಣರಾಜು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೆಹಲಿಯಲ್ಲಿ ಘೋಷಣೆಯಾದ ಯೋಜನೆಯ ಅನುದಾನ ಒಂದು ಪೈಸೆ ಕಡಿಮೆ ಇಲ್ಲದಂತೆ ಫಲಾನುಭವಿಗಳ ಖಾತೆಗೆ ತಲುಪುತ್ತಿದೆ. ಹಗಲು ರಾತ್ರಿ ಎನ್ನದೇ ದೇಶದ ಅಭಿವೃದ್ದಿಗೆ ತಮ್ಮನ್ನೇ ಸಮರ್ಪಣೆ ಮಾಡಿಕೊಂಡಿರುವ ಮೋದಿ ಅವರು ವಿಶ್ವ ನಾಯಕರು ಎಂದು ಬಣ್ಣಿಸಿದರು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೂರ್ಯಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಸುಭದ್ರವಾದ ಆಡಳಿತ ನೀಡುವ ಜೊತೆಗೆ ಎಲ್ಲಾ ವರ್ಗದ ಜನರಿಗೂ ತಲುಪುವಂತಹ ಯೋಜನೆಗಳನ್ನು ಜಾರಿ ಮಾಡಿದರು. ಅವರ ಹುಟ್ಟುಹಬ್ಬವನ್ನು ಸೇವಾ ಕಾರ್ಯಗಳ ಮಾಡುವ ಜೊತೆಗೆ ಯುವ ಮೋರ್ಚಾದಿಂದ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದರು.
ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಯಶಸ್ವಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು. ನಗರದ ನೂತನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸೇವಾ ಕಾರ್ಯಕ್ರಮದಲ್ಲಿ ರಕ್ತದಾನ ಮಾಡಿ 20ಕ್ಕು ಹೆಚ್ಚು ಮಂದಿ ರಕ್ತದಾನ ಮಾಡಿ, ಪ್ರಮಾಣ ಪತ್ರವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಸುರೇಶ್‍ನಾಯಕ್, ಉಪಾಧ್ಯಕ್ಷೆ ಮಮತಾ ಬಾಲಸುಬ್ರಮಣ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ. ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ನೂರೊಂದುಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಎಸ್. ಬಾಲಸುಬ್ರಮಣ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ್, ಅನಂದ್, ಮಹಿಳಾ ಮೊರ್ಚಾ ಅಧ್ಯಕ್ಷೆ ಮಲೆಯೂರು ಕಮಲಮ್ಮ, ಜಯಶೀಲಾ ರಾಜಶೇಖರ್, ವನಾಜಾಕ್ಷಿ, ದಾಕ್ಷಾಯಿನಿ,ಚಂದ್ರಶೇಖರ್, ರಂಗಸ್ವಾಮಿ, ಕೂಸಣ್ಣ, ನಗರಸಭೆ ಸದಸ್ಯರಾದ ಶಿವುನಾಯಕ್, ನಟರಾಜು, ಕುಲಗಾಣ ಶಾಂತಮೂರ್ತಿ, ಜಯಸುಂದರ್, ಶೈಲಾ, ಮಹೇಶ್ ಮೊದಾಲದವರು ಇದ್ದರು.