ಪೌಷ್ಠಿಕ ಆಹಾರ, ಆರೋಗ್ಯ ಕಾಳಜಿ ಅರಿವಿಗೆ ಪೆÇೀಷಣ್ ಮಾಸಾಚರಣೆ : ಮೋನಾರೋತ್
ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.21- ಮನುಷ್ಯನಿಗೆ ಆರೋಗ್ಯಕರ ಸದೃಢ ದೇಹ, ಪೌಷ್ಠಿಕಾಂಶಯುತ ಆಹಾರ ಅಗತ್ಯವಾಗಿದ್ದು, ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಪೋಷಣ್ ಮಾಸಾಚರಣೆ ಹಮ್ಮಿಕೊಳ್ಳÀಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾರೋತ್ ಅವರು ತಿಳಿಸಿದರು.
ತಾಲೂಕಿನ ಹಂಡ್ರಕಳ್ಳಿ ಮೋಳೆಯ ಶಾಲಾ ಆವರಣದಲ್ಲಿ ಬುಧವಾರ (ಸೆ.18) ದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ಪೆÇೀಷಣ್ ಅಭಿಯಾನ ಯೋಜನೆಯ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪೋಷಣ್ ಅಭಿಯಾನ ಯೋಜನೆಯು 2018ರ ಮಾರ್ಚ್ 8ರಂದು ಅನುಷ್ಠಾನಗೊಂಡಿದೆ. ಅಂತರಾಷ್ಟ್ರೀಯ ಮಹಿಳಾ ದಿನ ಆಚರಿಸುವ ಮಾರ್ಚ್ 8ರಂದು ಆರಂಭಗೊಂಡಿರುವ ಪೋಷಣ್ ಯೋಜನೆಯ ಮುಖ್ಯ ಉದ್ದೇಶ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ತಡೆಗಟ್ಟುವುದು, ಗರ್ಭಿಣಿ, ಬಾಣಂತಿಯರು ಚಿಕ್ಕ ಮಕ್ಕಳಲ್ಲಿ ಉಂಟಾಗುವ ರಕ್ತಹೀನತೆಯನ್ನು ಕಡಿಮೆಗೊಳಿಸುವುದಾಗಿದೆ ಎಂದರು.
ಆರೋಗ್ಯಕರವಾದ ಸದೃಢ ದೇಹ, ಪೌಷ್ಠಿಕವುಳ್ಳ ಆಹಾರ ಪ್ರತಿಯೊಬ್ಬರಿಗೂ ಅತ್ಯಂತ ಅವಶ್ಯವಿದೆ. ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸುವ ಸಲುವಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 1ರಿಂದ 31ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಜಿ.ಪಂ ಸಿಇಒ ಮೋನಾ ರೋತ್ ಅವರು ತಿಳಿಸಿದರು.
ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸೀಮಂತ, ಅನ್ನ ಪ್ರಸನ್ನ ಕಾರ್ಯಕ್ರಮವು ನಡೆಯಿತು. ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಕಾರ್ಯಕ್ರಮ ಸಹ ನಡೆಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಅಮ್ಮನ ಹೆಸರಿನಲ್ಲಿ ಒಂದು ಗಿಡ ಶೀರ್ಷಿಕೆಯಡಿ ಗಿಡ ನೆಡುವ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾ ರೋತ್ ಅವರು ನೆರವೇರಿಸಿದರು.
ಮಾದಾಪುರ ಮಾದಾಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೆ.ಎಂ. ರೂಪೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ನಿರೂಪಣಾಧಿಕಾರಿ ಜೆ.ಆರ್. ದಿನೇಶ್, ಪೋಷಣ್ ಅಭಿಯಾನ ಯೋಜನೆಯ ಜಿಲ್ಲಾ ಸಂಯೋಜಕರಾದ ಆರ್. ಚೇತನ್ ಕುಮಾರ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕರಾದ ಶಿವಸ್ವಾಮಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೀನಾಕ್ಷಿ,
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆಂಪರಾಜು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.