ನೇಹಾ ಹಿರೇಮಠ ಹತ್ಯೆ ಖಂಡಿಸಿ ಭಾವಪೂರ್ಣ ಶ್ರದ್ಧಾಂಜಲಿ
ಬೀದರ:ಏ.22:ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆಯನ್ನು ಖಂಡಿಸಿ ಬೀದರದ ತಹಸೀಲ್ದಾರ್ ಕಚೇರಿ ಮುಂಭಾಗ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವರು ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ, ಮೇಣದ ಬತ್ತಿ ಹಚ್ಚಿ, ಮೌನಾಚರಣೆ ಮೂಲಕ ನೇಹಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.
ವಿದ್ಯಾರ್ಥಿನಿ, ಸಹೋದರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಆರೋಪಿ ಯಾರೇ ಆಗಿರಲಿ ಅವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಕಾಲೇಜುಗಳಲ್ಲಿ ಯುಜಿಸಿ ಮಾರ್ಗಸೂಚಿ ಅನ್ವಯ ವಿದ್ಯಾರ್ಥಿಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
ನೇಹಾ ಅವರ ಕುಟುಂಬದ ದುಃಖದಲ್ಲಿ ನಾನೂ ಕೂಡ ಭಾಗಿ. ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುವೆ.
ಈ ಸಂದರ್ಭದಲ್ಲಿ ಎನ್ ಎಸ್ ಯುಐ ಘಟಕದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.