ನೇಹಾ ಹತ್ಯೆ ಖಂಡಿಸಿ ಮೌನ ಮೆರವಣಿಗೆ

ಧಾರವಾಡ, ಏ 22: ನೇಹಾ ಹಿರೆಮಠ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ನಗರದಲ್ಲಿಂದು ಧಾರವಾಡ ಅಂಜುಮನ್-ಎ-ಎಸ್ಲಾಂ ಸಂಸ್ಥೆ ವತಿಯಿಂದ ಮೌನ ಮೆರವಣಿಗೆ ನಡೆಸಲಾಯಿತು.
ಬೆಳಿಗ್ಗೆ ಅಂಜುಮನ್ ಸಂಸ್ಥೆಯಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಛೇರಿಗೆ ತಲುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಅಲ್ಲದೆ ಸಮುದಾಯದವರಿಂದ ಬೆಳಿಗ್ಗೆ 10 ರಿಂದ ಮದ್ಯಾಹ್ನ 3 ಗಂಟೆಯವರೆಗೆ ಅಂಗಡಿ, ಮಳಿಗೆಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಯಿತು.
ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲೂ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‍ಗೆ ಬೆಂಬಲ ನೀಡಲಾಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ವ್ಯಾಪಾರಸ್ಥರು ಅಂಗಡಿಗಳನ್ನು ಬಂದ್ ಮಾಡಿ, ಬೆಂಬಲ ಸೂಚಿಸಿದರು.