ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ, ಏ 22: ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ಇಂದು ಬಿಜೆಪಿಯಿಂದ ನಗರದ ಹಳೇಹುಬ್ಬಳ್ಳಿ ಸರ್ಕಲ್‍ನಲ್ಲಿ ಪ್ರತಿಭಟನೆ ಮಾಡಲಾಯಿತು.
ಹಳೇಹುಬ್ಬಳ್ಳಿ ವೃತ್ತದಲ್ಲಿ ಟೈರ್‍ಗೆ ಬೆಂಕಿ ಹಚ್ಚಿ, ಆರೋಪಿ ಭಾವಚಿತ್ರವನ್ನು ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಆರೋಪಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಶಿವು ಮೆಣಸಿನಕಾಯಿ, ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ ಮತ್ತಿತರರು ಉಪಸ್ಥಿತರಿದ್ದರು.