ಭಗವಾನ್ ಮಹಾವೀರ ಜಯಂತಿಯ ಆಚರಣೆ
ಕಲಬುರಗಿ,ಏ.21-ಭಗವಾನ್ ಮಹಾವೀರ ಜಯಂತಿಯ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯ ಶಿಷ್ಠಾಚಾರದ ತಹಶೀಲ್ದಾರ್ ಸೈಯದ್ ನಿಸಾರ್ ಅಹ್ಮದ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಡಾ.ಎಸ್ ಎಂ ಪಂಡಿತ್ ರಂಗಮಂದಿರದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಭಗವಾನ್ ಮಹಾವೀರ ಜಯಂತಿಯನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ರಮೇಶ್, ಕಲಾವಿದರಾದ ಬಾಬು ಕೋಬಾಳ, ಬಸಯ್ಯ ಗುತ್ತೇದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.