ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಬಳ್ಳಾರಿ, ಏ.21: ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ  ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ ಇದು ಖಂಡನೀಯ.
ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ, ಕಾಲೇಜು ಕ್ಯಾಂಪಸ್‍ಗಳು ಸುರಕ್ಷತೆಯ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು, ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಸಿಬಿಐ ಗೆ ಹಸ್ತಾಂತರ ಮಾಡಬೇಕೆಂದು ಎಬಿವಿಪಿ ಅಗ್ರಹಿಸಿ, ಘನವೆತ್ತ ರಾಜ್ಯಪಾಲರಿಗೆ, ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಮಂತ್ರಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು, ಬಳ್ಳಾರಿ ರವರ ಮುಖಾಂತರ ಮನವಿ ಸಲ್ಲಿಸಿದೆ.
ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ವಿನೋದ್ ರಾಂಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.