ಏ. 23ರಂದು ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
ಹುಮನಾಬಾದ್:ಏ.21: ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದಲ್ಲಿ ಏ. 23ರಂದು ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಲಿದೆ ಎಂದು ಬೀರಲಿಂಗೇಶ್ವರ ಪಂಚ ಕಮಿಟಿ ಸದಸ್ಯರು ತಿಳಿಸಿದ್ದಾರೆ.
ಏ. 22ರಂದು ಸಂಜೆ 5 ಗಂಟೆಗೆ ಬೀರಲಿಂಗೇಶ್ವರ ಪಾದಪೂಜೆ, ಏ. 23ರಂದು ರಾತ್ರಿ ಪಲ್ಲಕ್ಕಿ ಉತ್ಸವ, ಅನ್ನದಾಸೋಹ ಸೇರಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಏ. 24ರಂದು ಬಿದಾಯಿ ಕಾರ್ಯಕ್ರಮಗಳು ಜರುಗಲಿವೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಜಾತ್ರೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.