ಬಿಜೆಪಿಯಲ್ಲಿನ ಆಂತರಿಕ ಕಲಹ ಲೋಕಸಭಾ ಚುನಾವಣೆ ನಂತರ ಸ್ಫೋಟ : ಶಾಸಕ ಲಕ್ಷ್ಮಣ ಸವದಿ
ಅಥಣಿ / ಚಿಕ್ಕೋಡಿ : ಏ.21:ರಾಜ್ಯದಲ್ಲಿರುವ ಈಗಿನ ಪರಿಸ್ಥಿತಿ ಮತ್ತು ಜನರ ನಾಡಿ ಮಿಡಿತವನ್ನು ನೋಡಿದರೆ ಕಾಂಗ್ರೆಸ್ ಪಕ್ಷ ಈ ಲೋಕಸಭೆ ಚುನಾವಣೆಯಲ್ಲಿ ಮೇಲುಗೈ ಸಾಧಿಸುವುದು ಖಚಿತ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳೊಂದಿಗೆ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ಗುರಿ ಕಾಂಗ್ರೆಸ್ ಪಕ್ಷ ಹೊಂದಿದೆ. ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಹೇಳಿದರು.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉತ್ತಮ ಅವಕಾಶಗಳಿವೆ. ಏಕೆಂದರೆ ಕಳೆದ 10 ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಜನಸಾಮಾನ್ಯರು ಅಸಮಾಧಾನಗೊಂಡಿದ್ದಾರೆ ಎಂದ ಅವರು ಅದೇ ಸಮಯದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರು ಪ್ರಭಾವಿತರಾಗಿದ್ದಾರೆ. ಜನಸಾಮಾನ್ಯರು ಗ್ಯಾರಂಟಿಗಳಿಂದ ಸಂತೋಷವಾಗಿದ್ದಾರೆ. 80 ರಿಂದ 85 ರಷ್ಟು ಮಹಿಳೆಯರು ರಾಜ್ಯದಲ್ಲಿ ಕಾಂಗ್ರೆಸ್‍ಗೆ ಮತ ಹಾಕಲು ಸಿದ್ಧರಾಗಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ. ಬೆಳಗಾವಿ, ಚಿಕ್ಕೋಡಿ ಮತ್ತು ಕಾರವಾರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಎಂದ ಅವರು ಬಿಜೆಪಿ ಹಲವು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕಸಭೆ ಚುನಾವಣೆಯ ನಂತರ ಸಂಪುಟಕ್ಕೆ ಸೇರ್ಪಡೆಯ ಸುಳಿವು ನೀಡಿದ ಬಗ್ಗೆ ಮಾತನಾಡಿದ ಸವದಿ ಅವರು. ಸ್ವಲ್ಪ ತಾಳ್ಮೆಯಿಂದ ಇರಬೇಕು ನಾನು ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಇಷ್ಟು ಬೇಗ ನಾನು ಹೆಚ್ಚಿನದನ್ನು ನಿರೀಕ್ಷಿಸಬಾರದು. ಮೊದಲು ನನಗೆ ವಹಿಸಿದ ಜವಾಬ್ದಾರಿಯನ್ನು ಪೂರ್ಣಗೊಳಿಸುತ್ತೇನೆ. ಆನಂತರ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದರು.
ದೇಶದಲ್ಲಿ ಮೋದಿ ಅಲೆ ಸಂಪೂರ್ಣ ಕ್ಷೀಣಿಸಿದೆ. ಕಳೆದ 10 ವರ್ಷಗಳಲ್ಲಿ ಅವಧಿಯಲ್ಲಿ ಬಿಜೆಪಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಜನರಿಗೆ ತಿಳಿದಿದೆ ಈಗಿನ ಪರಿಸ್ಥಿತಿ ವಿಭಿನ್ನವಾಗಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೊದಲು, ಬಿಜೆಪಿ ನಾಯಕರು ‘ಗುಜರಾತ್ ಮಾದರಿ’ ಯನ್ನು ಇಡೀ ದೇಶಕ್ಕೆ ವಿಸ್ತರಿಸುವುದಾಗಿ ಹೇಳಿದ್ದರು. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ನದಿಗಳ ಜೋಡಣೆ, ವಿದೇಶಿ ಬ್ಯಾಂಕ್ ಗಳಲ್ಲಿರುವ ಕಪ್ಪುಹಣ ವಾಪಸ್ ತರುವುದು, ಭಾರತೀಯರ ಪ್ರತಿ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಜಮಾ ಮಾಡುವುದು, ರೈತರ ಆದಾಯ ದ್ವಿಗುಣಗೊಳಿಸುವುದು ಸೇರಿದಂತೆ ಹಲವು ಇತ್ಯಾದಿ ಭರವಸೆಗಳನ್ನು ಜನರ ಮನಸ್ಸಿನಲ್ಲಿ ಮೂಡಿಸಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಹುಬ್ಬಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರನ್ನು ಸೋಲಿಸುವ ಏಕೈಕ ಉದ್ದೇಶದಿಂದ ದಿಂಗಾಲೇಶ್ವರ ಸ್ವಾಮಿ ಸ್ವತಂತ್ರವಾಗಿ ಸ್ಪರ್ಧಿಸಿದ್ದಾರೆ. ದಿಂಗಾಲೇಶ್ವರ ಸ್ವಾಮಿ ಜೋಶಿ ವಿರುದ್ಧ ಸ್ಪರ್ಧಿಸಲು ಶೆಟ್ಟರ್ ಮತ್ತು ಯಡಿಯೂರಪ್ಪ ಅವರೇ ಕಾರಣ. ಬಿಜೆಪಿ ಪಕ್ಷದಲ್ಲಿನ ಆಂತರಿಕ ಕಲಹ ವ್ಯಾಪಕವಾಗಿ ಹರಡುತ್ತಿದೆ ಈ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಸೋಲಿಸಲು ಕೇಸರಿ ಪಕ್ಷದೊಳಗೆ ಪ್ರಯತ್ನಗಳು ನಡೆಯುತ್ತಿವೆ.
ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹವು ಉಲ್ಬಣಗೊಂಡು ಕೊತ ಕೊತ ಕುದಿಯುತ್ತಿದೆ ಲೋಕಸಭೆ ಚುನಾವಣೆಯ ನಂತರ ಸ್ಫೋಟಗೊಳ್ಳಲಿದೆ. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನು ಸೋಲಿಸುವ ಉದ್ದೇಶದಿಂದ ಕೆಎಸ್ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸಿದ್ದಾರೆ.
ಮಾಜಿ ಡಿಸಿಎಂ ಹಾಗೂ ಅಥಣಿ ಶಾಸಕ