ಕನ್ನಡಕ್ಕೆ ತ.ರಾ.ಸುಬ್ಬರಾವ್ ಕೊಡುಗೆ ಅನನ್ಯ
ಕಲಬುರಗಿ:ಏ.21: ಕಥೆ, ಕಾದಂಬರಿ, ನಾಟಕ, ಸಂಪಾದನೆ ಸೇರಿದಂತೆ ವಿವಿಧ ಪ್ರಕಾರದ ಸಾಹಿತ್ಯ ಕೃಷಿ ಮಾಡುವ ಮೂಲಕ ತ.ರಾ.ಸುಬ್ಬರಾವ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿರುವ ‘ಶ್ರೇಯಸ್ ಟ್ಯೂಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ತ.ರಾ.ಸುಬ್ಬರಾವ್‍ರ ಜನ್ಮದಿನೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ತ.ರಾ.ಸು ಅವರು ದೊಡ್ಡ ಪ್ರಮಾಣದಲ್ಲಿ ಜನರ ಪ್ರೀತಿ, ವಿಶ್ವಾಸ ಗಳಿಸಿದ್ದರು. ಪ್ರಗತಿಪರ ಚಿಂತಕರು, ಸಾಹಿತಿಗಳು, ವಾಗ್ಮಿಗಳಾಗಿದ್ದರು. ಪತ್ರಿಕಾರಂಗದಲ್ಲಿಯೂ ಅಮೂಲ್ಯವಾದ ಸೇವೆಯನ್ನು ಸಲ್ಲಿಸಿದ್ದಾರೆ. ಅವರು ಕನ್ನಡ ಸಾಹಿತ್ಯ ಲೋಕಕ್ಕೆ 61 ಗ್ರಂಥಗಳನ್ನು ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದ ಅಧ್ಯಕ್ಷ ಅಸ್ಲಾಂ ಶೇಖ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಸೋಹೆಲ್ ಶೇಖ್ ಸೇರಿದಂತೆ ಮತ್ತಿತರರು ಇದ್ದರು.