ನೇಹಾ ಹಿರೇಮಠ ಹತ್ಯೆ ಖಂಡಿಸಿ ಪ್ರತಿಭಟನೆ
ಕಲಬುರಗಿ,ಏ.20: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ,ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ ಅವರ ಬರ್ಬರ ಹತ್ಯೆ ಖಂಡಿಸಿ ಇಂದು ನಗರದ ಸರದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಮಿಂಚಿನ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಕಾರರು ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ. ನೇಹಾ ಹಿರೇಮಠ ಹತ್ಯೆ ರಾಜ್ಯದ ಜನತೆಗೆ ತೀವ್ರ ಆಘಾತ ಉಂಟುಮಾಡಿದೆ. ನೇಹಾ ಹತ್ಯೆ ಆರೋಪಿ ಫಯಾಜ್‍ಗೆ ಅತ್ಯಂತ ಉಗ್ರ ಶಿಕ್ಷೆಯನ್ನು ನೀಡುವಂತೆ ಆಗ್ರಹಿಸಿದರು.
ಪ್ರತಿಭಟನೆಯಿಂದ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.ಪೊಲೀಸರು ಮತ್ತು ಪ್ರತಿಭಟನೆಕಾರರ ನಡುವೆ ಮಾತಿನ ಚಕಮಕಿ ನಡೆಯಿತು.ನಾಗರಿಕ ಹಿತರಕ್ಷಣಾ ವೇದಿಕೆಯ ನೂರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡರು.