ನೇಹಾಳನ್ನು ಬರ್ಬರವಾಗಿ ಹತ್ಯೆಗೈದ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಲು ಆಗ್ರಹ
ಕೊಲ್ಹಾರ: ಏ.20:ಹಿಂದೂ ಯುವತಿ ನೇಹಾ ಕೊಲೆ ಹಿಂದೆ ಲವ್ ಜಿಹಾದ್ ಕೈವಾಡವಿದ್ದು ಕೂಡಲೇ ಕೊಲೆಗಾರನನ್ನು ಎನ್ಕೌಂಟರ್ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ತಾಲೂಕ ಅಧ್ಯಕ್ಷ ಮಹೇಶ್ ತುಂಬರಮಟ್ಟಿ ಆಗ್ರಹಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ, ಕೊಲೆಗಳು ದಿನೇ ದಿನೇ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ, ರಕ್ಷಣೆ ಇಲ್ಲದೆ ಇರುವುದು ಈ ಘಟನೆಗಳಿಗೆ ಕಾರಣವಾಗಿವೆ. ಹುಬ್ಬಳ್ಳಿ ವಿದ್ಯಾನಗರದ ಕೆಎಲ್‍ಇ ಯ ಅಡ್ಡಿಯಲ್ಲಿ ಬರುವ ಕರ್ನಾಟಕ ಲಿಂಗಾಯತ ಶಿಕ್ಷಣ ತಾಂತ್ರಿಕ ವಿಶ್ವವಿದ್ಯಾನಿಲಯ (ಬಿವಿಬಿ) ಆವರಣದಲ್ಲಿ ಗುರುವಾರ ರಂದು ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೇ ಚಾಕುವಿನಿಂದ ಕೊಲೆಮಾಡಿ ಹತ್ಯೆಗೈದಿರುವುದು ಅತ್ಯಂತ ಖಂಡನೀಯ. ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು.ಇಂತಹ ಪ್ರಕರಣಗಳು ರಾಜ್ಯಾದ್ಯಂತ ಪ್ರತಿ ದಿನವೂ ನಡೆಯುತ್ತಿದ್ದು ಸರ್ಕಾರ ಇವುಗಳ ಬಗ್ಗೆ ಗಮನ ನೀಡದೆ ಇರುವುದು ಈ ರೀತಿಯ ಘಟನೆಗಳು ಹೆಚ್ಚಾಗಿವೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಆದರೆ ಇದನ್ನು ರಾಜ್ಯ ಸರ್ಕಾರ ಜಾರಿ ಮಾಡಿಲ್ಲ ತಕ್ಷಣ ಇದನ್ನು ರಚನೆ ಮಾಡಬೇಕು. ಇಂತಹ ಆರೋಪಿಗಳಿಗೆ ಕಾನೂನು ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅವರು ಒತ್ತಾಯಿಸಿದರು.