ನೇಹಾ ಹೀರೆಮಠ ಕೊಲೆ ಆರೋಪಿಗೆ ಕಠಿಣ ಕಾನೂನು ಕ್ರಮಕ್ಕೆ ಡಾ. ಅಂಬಾರಾಯ ಅಷ್ಠಗಿ ಆಗ್ರಹ
ಕಲಬುರಗಿ : ಏ. 20 :ಹುಬ್ಬಳ್ಳಿಯ ನೇಹಾ ಹೀರೆಮಠ ಕೊಲೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದ್ದು, ಮಹಿಳೆಯರಿಗೆ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸ್ವಾತಂತ್ರ್ಯ ಇಲ್ಲದಂತಾಗಿದೆ.ನೇಹಾಳ ಕೊಲೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಆರೋಪಿಯನ್ನು ಕುಡಲೇ ಬಂಧಿಸಿ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ. ಅಂಬಾರಾಯ ಅಷ್ಠಗಿ ಯವರು ರಾಜ್ಯ ಸರ್ಕಾರ ಹಾಗೂ ಪೆÇಲೀಸ ಇಲಾಖೆಗೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಹುಬ್ಬಳ್ಳಿಯಲ್ಲಿ ನಡೆದ ಯುವತಿಯ ಕೊಲೆ ಪ್ರಕರಣ ಇಡಿ ರಾಜ್ಯವೇ ಬೆಚ್ಚಿ ಬೀಳಿಸಿದೆ. ಆರೋಪಿಯು ಕಾನೂನಿನ ಭಯವಿಲ್ಲದೇ ಕೊಲೆ ಮಾಡಿರುವುದು ರಾಜ್ಯದಲ್ಲಿ ಮಹಿಳೆಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಅಷ್ಠಗಿ ಕಳವಳ ವ್ಯಕ್ತಪಡಿಸಿದ್ದಾರೆ.
ಹುಬ್ಬಳಿಯಲ್ಲಿ ನಡೆದ ಈ ಬರ್ಬರ ಹತ್ಯೆಯನ್ನು ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಸಾಮಾನ್ಯೀಕರಿಸುವುದು ಸರಿಯಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೆÇಲೀಸ ಇಲಾಖೆ ಎಚ್ಚರ ವಹಿಸಬೇಕು ಎಂದು ಅವರು ಹೇಳಿದ್ದಾರೆ.
ರಾಜ್ಯದ ಜನತೆ ಕಂಡ ಕನಸಿನ ಸರ್ವಜನಾಂಗದ ಶಾಂತಿಯ ತೋಟ ಇದೇನಾ? ಎಂದು ಡಾ ಅಂಬಾರಾಯ ಅಷ್ಠಗಿ ಪ್ರಶ್ನಿಸಿದ್ದಾರೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಡಾ ಅಷ್ಠಗಿ ಒತ್ತಾಯಿಸಿದ್ದಾರೆ.