ನೇಹಾ ಹತ್ಯೆ ಖಂಡಿಸಿ, ಎಬಿವಿಪಿ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಹೊಸಪೇಟೆ 20: ಜಿಹಾದಿಯ ಕಾರಣಕ್ಕಾಗಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ನೇಹಾ ಹಿರೇಮಠ ಎಂಸಿಎ ವಿದ್ಯಾರ್ಥಿನಿಯನ್ನು ಪಯಾಜ್ ಎಂಬಾತ ಹತ್ಯೆ ಮಾಡಿದ್ದಾನೆ. ಈ ಕೃತ್ಯವನ್ನು ಖಂಡಿಸಿ, ಎಬಿವಿಪಿ ಹೊಸಪೇಟೆ ನಗರ ಘಟಕದ ಪದಾಧಿಕಾರಿಗಳು, ನಗರದ ತಹಶೀಲ್ದಾರ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ನಿರಾಕರಿಸಿದಕ್ಕಾಗಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದ ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ ಆಕೆಯನ್ನು 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಜ್ಞಾನದ ದೇಗುಲಗಳಾದ ಶಾಲಾ-ಕಾಲೇಜುಗಳಲ್ಲಿ ಹಾಡು ಹಗಲೇ ನೇಹಾ ಹಿರೇಮಠ ವಿದ್ಯಾರ್ಥಿನಿಯನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ಖಂಡನೀಯ. ಈ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈ ಕೃತ್ಯವನ್ನು ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇತಂಹ ಘಟನೆ ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಬಿಪಿ ರಾಜ್ಯದ ಹೋರಾಟಕ್ಕೆ ಕರೆ ನೀಡಿದ ಈ ಹಿನ್ನೆಲೆಯಲ್ಲಿ ಹೊಸಪೇಟೆ ನಗರ ಶಾಖೆಯಿಂದ ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಂಕರ್ ಆನಂದ್ ಸಿಂಗ್ ಕಾಲೇಜ್  ಪ್ರಥಮ ದರ್ಜೆ ವಿದ್ಯಾರ್ಥಿಗಳು ಹಾಜರಿದ್ದರು. ನಗರ ಕಾರ್ಯದರ್ಶಿ ಪ್ರದೀಪ್ ಕುಮಾರ್ ವಿನೀತ್ ಕುಮಾರ್ ವೆಂಕಟ್ ಸಾಯಿ ವಿಶ್ವ, ನವೀನ್, ವಿಜಯ್ ಕುಮಾರ್ ಕಾರ್ತಿಕ್ ಹಾಜರಿದ್ದರು.
One attachment • Scanned by Gmail