ಉತ್ತಮ ಪರಿಸರ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ

ಸಂಜೆವಾಣಿ ವಾರ್ತೆ
ಹರಿಹರ ಏ 20 ; ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಡಳಿತ ಮುಖ್ಯ ವೈದ್ಯಾಧಿಕಾರಿ ಅಬ್ದುಲ್ ಖಾದರ್ ಹೇಳಿದರು  ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಆಡಳಿತ ಮುಖ್ಯ ವೈದ್ಯಾಧಿಕಾರಿಯಾಗಿ ಅಧಿಕಾರವಹಿಸಿಕೊಂಡು ಸಂಜೆವಾಣಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಕುಡಿಯುವ ನೀರಿನಿಂದ ಕಾಲರಾ, ಕರುಳುಬೇನೆ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋ‌ಗಗಳು ಈ ಅವಧಿಯಲ್ಲಿ ಹೆಚ್ಚಾಗಿ ಹರಡುತ್ತವೆ. ಸಾಲು ಸಾಲು ಹಬ್ಬಗಳು ಹಾಗೂ ಜಾತ್ರೆಗಳು ನಡೆಯು ಸ್ಥಳಗಳಿಗೆ  ನಮ್ಮ ಆರೋಗ್ಯ ಇಲಾಖೆಯ ತಂಡ  ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿಸಲಾಗುವುದು ಸ್ವಚ್ಛತೆ ಶುದ್ಧ ಕುಡಿಯುವ ನೀರಿನ ಹಾಗೂ ಆಹಾರದ ಸಂರಕ್ಷಣೆ ಪರಿಸರ ನೈರ್ಮಲ್ಯದ ನಿರ್ವಹಣದ ಬಗ್ಗೆ ತಿಳಿಸುವುದು ರಸ್ತೆ ಬದಿ ಬೀದಿ ಬದಿಗಳಲ್ಲಿ ಕತ್ತರಿಸ ಹಣ್ಣು ಮತ್ತು ತೆರೆದಟ್ಟ ಆಹಾರ ಪದಾರ್ಥಗಳನ್ನು ಮಾರಾಟ ಮಾಡಿದಂತೆ ಹಾಗೂ ಸೇವಿಸಬಾರದೆಂದು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಲು ತಾಲೂಕು ಮಟ್ಟದ ಎಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟಲು ವೈಯಕ್ತಿಕ ಸ್ವಚ್ಛತೆ ಜೊತೆಗೆ ಸಾಮಾಜಿಕ ಸ್ವಚ್ಛತೆಯೂ ಮುಖ್ಯವಾಗಿದೆ  ಆರೋಗ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ ಇತ್ತೀಚೆಗೆ ಸಾಂಕ್ರಾಮಿಕ ರೋಗ ಪ್ರಕರಣಗಳಲ್ಲಿ ಇಳಿಮುಖವಾಗಿದೆ. ರೋಗದ ತೀವ್ರತೆಯ ಮೇಲೆ ಜನ ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಮಲೇರಿಯಾ, ಡೆಂಗಿ ಸೇರಿ ಯಾವುದೇ ಸಾಂಕ್ರಾಮಿಕ ರೋಗ ಕಂಡುಬಂದರೂ ರೋಗಿ ವಾಸವಿರುವ ಏರಿಯಾದಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ’ ಪ್ರತಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮೂಲಕ ಲಾರ್ವಾ (ಸೊಳ್ಳೆ ಮರಿಗಳು) ಸರ್ವೆ ನಡೆಯುತ್ತದೆ. ಕಂಡುಬಂದಲ್ಲಿ ಆ ನೀರನ್ನು ಚೆಲ್ಲಲು ತಿಳಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಪ್ರಕರಣಗಳು ಕಂಡುಬಂದಲ್ಲಿ ಆರೋಗ್ಯ ಇಲಾಖೆಯಿಂದ ವಿಶೇಷವಾಗಿ ಜಾಗೃತಿ ಮೂಡಿಸುವ ಜೊತೆಗೆ ನಿಗಾ ವಹಿಸಲಾಗುತ್ತದೆ ಎಂದು ವಿವರಿಸಿದರು.ಅಧಿಕಾರ ವಹಿಸಿಕೊಂಡ ಮೇಲೆ ನಗರ ಮತ್ತು ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ  ಕಾಪಾಡುವ ದೃಷ್ಟಿಯಿಂದ ಮಂಜುನಾಥ ಕ್ರಮಗಳನ್ನು ಅನುಸರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ತಂಡ ಪ್ರಮುಖ ಪಾತ್ರ ವಹಿಸುವಂತೆ ಸೂಚನೆಯನ್ನು ನೀಡಿದಂತೆ ವೈದ್ಯರಗಳು ಆರೋಗ್ಯ ಇಲಾಖೆಯ ಶಿಕ್ಷಣ ಅಧಿಕಾರಿ ಆರೋಗ್ಯ ಅಧಿಕಾರಿ ಸಿಬ್ಬಂದಿಗಳ ತಂಡ  ಕಾರ್ಯನಿರ್ವಹಿಸುತ್ತಿದ್ದಾರೆ ಸಾರ್ವಜನಿಕರು ಸದೃಢಆರೋಗ್ಯವಂತರಾಗಿರುವುದಕ್ಕೆ ನಿರಂತರವಾಗಿ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ ಉತ್ತಮ ಪರಿಸರ ಆರೋಗ್ಯ ನಿರ್ಮಾಣ ಮಾಡೋಣ ಎಂದರು.