ತಾಯಂದಿರು ನಿರ್ಭೀತಿಯಿಂದ ನರೇಗಾ ಕಾಮಗಾರಿಗಳಲ್ಲಿ ತೊಡಗಿಕೊಳ್ಳಿ: ರಿಶಿ ಆನಂದ
ಸಂಜೆವಾಣಿ ವಾರ್ತೆ,
ವಿಜಯಪುರ,ಏ.20 :ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರ ಮೂರು ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡಲು ಜಿಲ್ಲೆಯಲ್ಲಿ 163 ಕೂಸಿನ ಮನೆಗಳನ್ನು ಪ್ರಾರಂಭ ಮಾಡಲಾಗಿದೆ. ಅದೇ ರೀತಿ ಬೆನಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಸಹ ಕೂಸಿನ ಮನೆಯನ್ನು ಪ್ರಾರಂಭಿಸಲಾಗಿದೆ. ಎಲ್ಲರೂ ನಿಮ್ಮ ಮೂರು ವಷರ್Àದ ಒಳಗಿನ ಮಕ್ಕಳನ್ನು ಕೂಸಿನ ಮನೆಯಲ್ಲಿ ಬಿಟ್ಟು ನರೇಗಾ ಕೆಲಸ ಮಾಡಬಹುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಶುಕ್ರವಾರ ಅವರು ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.
ಕೂಸಿನ ಮನೆಯಲ್ಲಿ ನಿಮ್ಮ ಮಕ್ಕಳನ್ನು ನೋಡಿಕೊಳ್ಳಲು ಮತ್ತು ಆರೈಕೆ ಮಾಡಲು ಪ್ರತ್ಯೇಕವಾಗಿ ಮಕ್ಕಳ ಆರೈಕೆದಾರರನ್ನು ಆಯ್ಕೆ ಮಾಡಲಾಗಿದೆ. ಅಲ್ಲಿ ಮಕ್ಕಳ ಆರೈಕೆದಾರರು ಮಕ್ಕಳಿಗೆ ಆಟ-ಪಾಠ, ಪಾಲನೆ-ಪೆÇೀಷಣೆ, ವೈಯಕ್ತಿಕ ಸ್ವಚ್ಛತೆ ಕಡೆಗೆ ವಿಶೇಷ ಗಮನ ನೀಡುತ್ತಾರೆ. ಕಾರ್ಮಿಕರು ನಿರ್ಭೀತಿಯಿಂದ ನಿಮ್ಮ ಮಕ್ಕಳನ್ನು ಕೂಸಿನ ಮನೆಗಳಲ್ಲಿ ಬಿಟ್ಟು ನೆಮ್ಮದಿಯಿಂದ ಕೆಲಸ ಮಾಡಬಹುದು. ನರೇಗಾದಡಿ ಹೆಚ್ಚು ಕೆಲಸ ನಿರ್ವಹಿಸಿ ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಿ, ಪ್ರತಿದಿನ ಮಹಿಳೆಯರಿಗೆ ಹಾಗೂ ಪುರುಷರಿಗೆ ಸಮಾನ ಕೂಲಿ ರೂ. 349 ಇದೆ. ಎಲ್ಲರೂ ಈ ಸೌಲಭ್ಯವನ್ನು ಪಡೆದು ಅಭಿವೃದ್ಧಿಯತ್ತ ಸಾಗಬೇಕು. ಹಾಗೆಯೇ ವಿಶೇಷ ಚೇತನರು, ಹಿರಿಯ ನಾಗರಿಕರು ಹಾಗೂ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ನರೇಗಾ ಯೋಜನೆಯ ಕೆಲಸದಲ್ಲಿ ಶೇ.50 ರಷ್ಟು ರಿಯಾಯತಿ ನೀಡಲಾಗಿದೆ. ಆದ್ದರಿಂದ ಎಲ್ಲರೂ ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.
ನಂತರ ಬೆನಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಗ್ರಂಥಾಲಯಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರು, ಪುಸ್ತಕಗಳು ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ, ಗ್ರಂಥಾಲಯದ ಮುಂಭಾಗದಲ್ಲಿ ಖಾಲಿ ಜಾಗೆಯಲ್ಲಿ ವಿವಿಧ ರೀತಿಯ ಸಸಿಗಳನ್ನು ಬೆಳೆಸಿ ಉದ್ಯಾನವನ ನಿರ್ಮಾಣ ಮಾಡಿ ಮುಕ್ತ ಗ್ರಂಥಾಲಯ ಮಾಡಲು ಸೂಚಿಸಿದರು.
ಈ ವೇಳೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಸಿನ ಮನೆ ಎಂಬ ಶಿರ್ಷಿಕೆಯಡಿ ಪ್ರಾರಂಭವಾಗಿರುವ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಕೂಸಿನ ಮನೆ ಕಟ್ಟಡ ಹಾಗೂ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಇದೇ ವೇಳೆ ಮಕ್ಕಳ ಹಾಜರಾತಿ, ಮಕ್ಕಳಿಗೆ ನೀಡುತ್ತಿರುವ ಆಹಾರ, ಆಟಿಕೆ ಸಾಮಾನುಗಳನ್ನು, ಕೂಸಿನ ಮನೆ ಕಡತಗಳನ್ನು ಪರಿಶೀಲಿಸಿದರು. ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ವ್ಯವಸ್ಥಿತವಾಗಿ ಪೌಷ್ಠಿಕ ಆಹಾರ ಒದಗಿಸಬೇಕು. ಆಟದ ಸಮುಯದಲ್ಲಿ ಮಕ್ಕಳಿಗೆ ಆಟಿಕೆ ಸಾಮಾನುಗಳನ್ನು ವಿತರಿಸಬೇಕು, ಕೂಸಿನ ಮನೆಯ ಗೋಡೆಗಳ ಮೇಲೆ ಇನ್ನೂ ಹೆಚ್ಚಿನ ಆಕಷರ್Àಕ ಚಿತ್ರಗಳು, ವರ್ಣಮಾಲೆಗಳು ಹಾಗೂ ಮೂಲಾಕ್ಷರಗಳನ್ನು ಬಿಡಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಬಳಿಕ ಗ್ರಂಥಾಲಯದ ಮುಂಭಾಗದಲ್ಲಿರುವ ಜಲಜೀವನ ಮಿಷನ್ ಯೋಜನೆಯಡಿ ನಿರ್ಮಾಣವಾದ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕÀ ಸಿ. ಆರ್. ಮುಂಡರಗಿ, ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ಸಹಾಯಕ ನಿರ್ದೇಶಕರು(ಗ್ರಾ.ಉ) ಸಂಜಯ ಖಡಗೇಕರ, ರೂಗಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಬಸವರಾಜ ಬಬಲಾದ, ಬೆನಕನಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ ರಾಠೋಡ, ಕೂಸಿನ ಮನೆಯ ಮಕ್ಕಳ ಆರೈಕೆದಾರರು ಹಾಗೂ ಇತರರು ಉಪಸ್ಥಿತರಿದ್ದರು.
