ವಿದ್ಯಾರ್ಥಿನಿ ಹತ್ಯೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕಲಬುರಗಿ:ಏ.19: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಲವ್ ಜಿಹಾದಿಯ ಕಾರಣಕ್ಕಾಗಿ ಪಯಾಜ್ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ರಾಜ್ಯವ್ಯಾಪಿ ಕರೆಯ ಮೇರೆಗೆ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದಲ್ಲಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರತಿಭಟನಾ ಮೆರವಣಿಗೆ ಮಾಡಿದರು. ಎಬಿವಿಪಿ ಕರ್ನಾಟಕ ಉತ್ತರರಾಜ್ಯ ಕಾರ್ಯದರ್ಶಿ ಸಚಿನ್ ಕುಳಗೇರಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರತಿಭಟನೆಕಾರರು ನಂತರ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಕಳಿಸಿ, ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೆಎಲ್‍ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದ್ದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದರು.
ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕ್ರತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ಪೆÇಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾಧ್ಯಂತ ಪೆÇಲೀಸರು ಶಾಲಾ ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ, ಕಾಲೇಜು ಕ್ಯಾಂಪಸ್‍ಗಳು ಸುರಕ್ಷತೆಯ ಕೇಂದ್ರಗಳಾಗಬೇಕು, ಆ ನಿಟ್ಟಿನಲ್ಲಿ ಪೆÇಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು, ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಬೇಕು ಎಂದು ಅವರು ಒತ್ತಾಯಿಸಿದರು.