ಕುರುಬರ ಹಾಸ್ಟಲ್ ನಲ್ಲಿವಿಜಯನಗರ ಸಾಮ್ರಾಜ್ಯದ ಸಂಸ್ಥಾಪನಾ ದಿನಾಚರಣೆ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.19: ಜಿಲ್ಲಾ ಕುರುಬರ ಸಂಘದ ಹಕ್ಕಬುಕ್ಕರ ವಿದ್ಯಾರ್ಥಿ ನಿಲಯದಲ್ಲಿ ವಿಜಯನಗರ ಸಾಮ್ರಾಜ್ಯದ 688 ನೇ  ಸಂಸ್ಥಾಪನಾ ದಿನಾಚರಣೆಯನ್ನು ಹಕ್ಕಬುಕ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನಗಳನ್ನು ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಡಾ. ಗಾದಿಲಿಂಗನಗೌಡ, ಕಾರ್ಯದರ್ಶಿ ಅಲ್ಲಿಪುರ ಕೆ.ಮೋಹನ್, ಮಾಜಿ ಅಧ್ಯಕ್ಷ ಕೆ.ರಾಮಕೃಷ್ಣ ಮೊದಲಾದವರು  ಇದ್ದರು.