ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಚುರುಕುಗೊಳಿಸಿ : ಮಾಜಿ ಶಾಸಕ ಡೊಂಗರಗಾAವ
ಅಥಣಿ :ಸೆ.೨೧: ಪಕ್ಷದ ಸಂಘಟನೆ ಹಾಗೂ ಶಕ್ತಿ ಹೆಚ್ಚಿಸಿಕೊಳ್ಳಲು ಆಂತರಿಕವಾಗಿ ಸದಸ್ಯತ್ವ ಅಭಿಯಾನ ಚುರುಕುಗೊಳಿಸಬೇಕು. ಪಕ್ಷನನ್ನು ಸಂಘಟನಾತ್ಮಕವಾಗಿ ಬಲಪಡಿಸಬೇಕು’ ಎಂದು ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಶಹಾಜಹಾನ ಡೊಂಗರಗಾAವ ಮನವಿ ಮಾಡಿದರು.
ಅವರು ಬೆಳಗಾವಿಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಘಟಕದ ಸದಸ್ಯತ್ವ ನೋಂದಣಿ ಹಾಗೂ ಬೂತ್ ಸಮಿತಿ ಅಭಿಯಾನ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು ಪಕ್ಷ ಬೇರು ಮಟ್ಟದಿಂದ ಗಟ್ಟಿಯಾದರೆ ಮಾತ್ರ ಜೆಡಿಎಸ್ ಹೆಮ್ಮರವಾಗಿ ಬೆಳೆಯುತ್ತದೆ. ಎಲ್ಲ ಸಮುದಾಯಗಳ ಜನರನ್ನು ಒಳಗೊಂಡು ನೋಂದಣಿ ಮಾಡುವ ಪ್ರಕ್ರಿಯೆ ನಡೆಸಬೇಕು ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಿ ಹೊಸಬರನ್ನು ಪಕ್ಷಕ್ಕೆ ಕರೆತನ್ನಿ. ಪ್ರತಿ ಬೂತ್‌ನಲ್ಲಿ ಕನಿಷ್ಠ ೧೦ ಪ್ರಾಮಾಣಿಕ ಸದಸ್ಯರನ್ನು ನೋಂದಣಿ ಮಾಡಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಯಾರು ಪಕ್ಷದ ಪರವಾಗಿ ದುಡಿಯುತ್ತಾರೆ. ಮುಂದಿನ ಚುನಾವಣೆಯ ನಿಮ್ಮ ಟಿಕೆಟ್ ನಿಮ್ಮ ಮತಕ್ಷೇತ್ರದಲ್ಲಿ ಎಷ್ಟು ಜನರಿಗೆ ಸದಸ್ಯತ್ವದ ನೋಂದಣಿ ಮಾಡಿಸಿದ್ದಾರೆ ಎಂಬುದರ ಮೇಲೆ ನಿರ್ಧಾರವಾಗುತ್ತದೆ’ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಯ ಉಸ್ತುವಾರಿಗಳಾಗಿ ಮಾಜಿ ಸಚಿವ ಆನಂದ ಆಸ್ನೋಟಿಕರ್. ಎಚ್ ಎಸ್ ಶಿವಶಂಕರ್. ವೀರಭದ್ರಪ್ಪ ಹಾಲರವಿ ಮಾಜಿ ಶಾಸಕ ಚಿಕ್ಕೋಡಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಲ್ಲಪ್ಪ ಮಗೆಣ್ಣವರ. ಸೇರಿದಂತೆ ಹಲವರು ಉಪಸ್ಥಿತರಿದ್ದರು.