ಮಕ್ಕಳ ಹೃದಯಲ್ಲಿ ದೇವರಿದ್ದಾನೆ : ಡಾ. ಬಸವಲಿಂಗ ಪಟ್ಟದ್ದೇವರು
ಭಾಲ್ಕಿ: ಸೆ.೨೧:ಅರಳುವ ಮಕ್ಕಳ ಹೃದಯಲ್ಲಿ ದೇವರಿದ್ದಾನೆ ಎಂದು ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ನಾಡೋಜ ಡಾ| ಬಸವಲಿಂಗ ಪಟ್ಟದ್ದೇವರು ಪ್ರತಿಪಾದಿಸಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶುಕ್ರವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆಯವರಿAದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ದೇಶದ ಸಂಪತ್ತು ಮಕ್ಕಳಾಗಿದ್ದಾರೆ. ಮಕ್ಕಳ ಸರ್ವತೋಮುಖ ಏಳ್ಗೆಯಾದರೆ ದೇಶದ ಏಳ್ಗೆಸಾಧ್ಯ. ಶಶಿಧರ ಕೋಸಂಬೆಯವರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ತಮ್ಮ ಅಧಿಕಾರದ ಸದ್ಬಳಕೆ ಮಾಡಿಕೊಳ್ಳುತ್ತಿರುವುದು ಸಾರ್ಥಕವಾಗಿದೆ. ಮಕ್ಕಳಿಗೆ ಹಿಂಸಿಸದೇ ಕಾರ್ಯನಿರ್ವಹಿಸಬೇಕು. ಮಕ್ಕಳಿಗಾಗಿ ಉತ್ತಮ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಮಾನವ ಸಂಪನ್ಮೂಲವಾದ ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಕಾರ್ಯಮಾಡುತ್ತಿರುವ ಶಶಿಧರ ಕೋಸಂಬೆ ಯಾವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಇದೇವೇಳೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆಯವರ ಜೊತೆಯಲ್ಲಿ ಆಗಮಿಸಿದ ತಾಲೂಕಿನ ಎಲ್ಲಾ ಅಧಿಕಾರಿಗಳಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪ್ರಮುಖರಾದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಸಿಡಿಪಿಓ ಶ್ರೀನಿವಾಸ ಬಾಲವಾಲೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸತೀಶಕುಮಾರ ಸಂಗನ್, ಗೌರಿಶಂಕರ ಪರತಾಪೂರ, ಪ್ರಶಾಂತ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷಿö್ಮ.ಬಿ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ವಿಜಯಮಾಲಾ ವಗ್ಗೆ ಮುಂತಾದವರು ಇದ್ದರು.