ಮೇಣದ ದೀಪದ ಮತದಾನದ ಜಾಗೃತಿ ಮೆರವಣಿಗೆ
ಅಫಜಲಪುರ:ಏ.18: ಲೋಕಸಭಾ ಚುನಾವಣೆ ಹಿನ್ನೆಲೆ ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮೇಣ ದೀಪದ ಮತದಾನದ ಜಾಗೃತಿ ಮೆರವಣಿಗೆ ಮೂಲಕ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಸಜ್ಜದ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ತಹಸೀಲ್ದಾರದ ಸಂಜೀವಕುಮಾರ ದಾಸರ್ ಮತದಾನ ಜಾಗೃತಿ ಕುರಿತು ಮಾತನಾಡಿದರು. ನಂತರ ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಸಹಾಯಕ ನಿರ್ದೇಶಕ ರಮೇಶ ಪಾಟೀಲ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು.