ಕೌಶಲ್ಯದ  ಜೊತೆ ವಿದ್ಯಾರ್ಥಿಗಳು ಮಾನವೀಯತೆ ಗುಣ ಬೆಳೆಸಿಕೊಳ್ಳಬೇಕು – ಭೀಮಣ್ಣ ಗಜಾಪುರ.
ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಏ.18 :-  ಮಕ್ಕಳ ಶೈಕ್ಷಣಿಕ ಗುಣ ಮಟ್ಟ ಹೆಚ್ಚಿಸಿಕೊಳ್ಳಲು ನಿರಂತರ ಪರಿಶ್ರಮ ಎಷ್ಟು ಅಗತ್ಯವೋ ಸ್ಪರ್ಧಾತ್ಮಕ ಪರೀಕ್ಷಾ ಸಮಯದಲ್ಲಿ   ಕೌಶಲ್ಯತೆ ಅಷ್ಟೇ ಉಪಯೋಗವಾಗಲಿದೆ. ಕೌಶಲ್ಯದ ಜೊತೆ ಮಾನವೀಯತೆ ಹಾಗೂ ಸಂಸ್ಕಾರ ಬೆಳೆಸಿಕೊಂಡಲ್ಲಿ ದೇಶದ ಒಬ್ಬ ಸತ್ಪ್ರೇಜೆಯಾಗಬಲ್ಲ ಎಂದು ಲೇಖಕ ಭೀಮಣ್ಣ ಗಜಾಪುರ ತಿಳಿಸಿದರು. 
ಅವರು ತಾಲೂಕಿನ ಗುಂಡಿನಹೊಳೆ ಸಮೀಪದ  ಜ್ಞಾನಮಂಟಪ ಸಂಸ್ಥೆಯ ಸುಜ್ಞಾನ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಸಿಇಟಿ ತರಭೇತಿ ಬೀಳ್ಕೊಡುಗೆ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡುತ್ತ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೌಶಲ್ಯತೆ ಪಡೆದುಕೊಳ್ಳಲು ತರಬೇತಿ ಪಡೆದು ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ ಬರೀ ಪುಸ್ತಕದ ಹುಳುಗಳಾಗದೆ ಅದರ ಜೊತೆ ಸಂಸ್ಕಾರ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ಮಕ್ಕಳಿಗೆ ಕಿವಿಮಾತು ಹೇಳಿದರು.
ಜ್ಞಾನಮಂಟಪ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ.ಉಮೇಶ್ ಮಾತನಾಡಿ ದೊಡ್ಡ ದೊಡ್ಡ ನಗರಗಳಲ್ಲಿ ಸಿಇಟಿ, ನೀಟ್ ತರಭೇತಿಗಳು ನಡೆಯುತ್ತವೆ ಆದರೆ ಗ್ರಾಮೀಣ ಭಾಗಗಳಲ್ಲಿ ನಡೆದರೆ ಸ್ಥಳೀಯ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುತ್ತದೆ ಎನ್ನುವ ಉದ್ದೇಶದಿಂದ ನಮ್ಮ ಸಂಸ್ಥೆಯಿಂದ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಇಲ್ಲಿಯ ವಿದ್ಯಾರ್ಥಿಗಳಿಗೆ ಸಿಇಟಿ ನೀಟ್ ಪರೀಕ್ಷೆ ಎದುರಿಸಲು ಉತ್ತಮ ತರಭೇತಿ ನೀಡಿದ್ದು ಸಾರ್ಥಕತೆಯಾಗಿದೆ ಎಂದರು. ಹಲವು ದಿನಗಳ ಕಾಲ ವಿದ್ಯಾರ್ಥಿಗಳು ತರಭೇತಿ ಪಡೆದು ಸಂತೖಪ್ತಿಭಾವವನ್ನು ಹೊಂದಿದ್ದಾರೆ ಈಗಾಗಿ ಮುಂದಿನ ದಿನಗಳಲ್ಲಿ ಕೂಡ್ಲಿಗಿಯಂತಹ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ತರಭೇತಿಗಳನ್ನು ಆಯೋಜಿಸಲಾಗುವುದು ಎಂದರು.ಈ ಬಾರಿ 53 ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದಾರೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೃಷ್ಣ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಉಧ್ಯೋಗ ಗಿಟ್ಟಿಸಿಕೊಳ್ಳಬೇಕಾದರೆ  ಸಿಇಟಿ,ನೀಟ್ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕಾದಲ್ಲಿ ಕೌಶಲ್ಯ ಬಹುಮುಖ್ಯವಾಗುತ್ತದೆ ಈಗಾಗಿ ವಿದ್ಯಾರ್ಥಿಗಳು ನಿರಂತರ ಪರಿಶ್ರಮದ ಜೊತೆಗೆ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು.ಸಿಇಟಿ ನೀಟ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಹುಆಯ್ಕೆಯ ಉತ್ತರಗಳಲ್ಲಿ ಎರಡು  ಆಯ್ಕೆಗಳು ಉತ್ತರಕ್ಕೆ ಬಹುಸಮೀಪ ಇರುವಂತೆ ಮಾಡಿ ವಿದ್ಯಾರ್ಥಿಗಳ ಜ್ಞಾನ,ಕೌಶಲ್ಯಗಳನ್ನು ಪರೀಕ್ಷೆ ಮಾಡುತ್ತಾರೆ ಇಲ್ಲಿ ಎಡವಿದರೆ ವಿದ್ಯಾರ್ಥಿಗಳು ವರ್ಷಗಟ್ಟಲೇ ಓದಿದರೂ  ಎಷ್ಟೇ ಪರಿಶ್ರಮಪಟ್ಟರೂ ಶ್ರಮ ವ್ಯರ್ಥ ಆಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಸ್ಪರ್ಧಾತ್ಮ ಪರೀಕ್ಷೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕಾದರೆ ಯುದ್ದ ಗೆದ್ದಷ್ಟೇ ಕಷ್ಟಪಡಬೇಕಾಗುತ್ತದೆ, ಸಿಇಟಿ ನೀಟ್ ಪರೀಕ್ಷೆಗಳಲ್ಲಿ 1 ಲಕ್ಷ ಸ್ಥಾನಗಳಿಗೆ 15 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ ಈಗಾಗಿ ಬಹಳ ಸ್ಪರ್ಧೆಯನ್ನು ಎದುರಿಸಬೇಕಾಗುತ್ತದೆ. ಇಂಜಿನಿಯರ್, ವೈಧ್ಯರು ಆಗುವ ಕನಸು ಕಾಣುತ್ತಿದ್ದ  ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕಾಗುತ್ತದೆ ಎಂದರು
ಜ್ಞಾನಮಂಪಟ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜಿ.ಶ್ರೀಧರ,  ಸಂಪನ್ಮೂಲ ವ್ಯಕ್ತಿ ರೋಷನ್ ಉಪಸ್ಥಿತರಿದ್ದರು. ಸಿಇಟಿ ತರಭೇತಿ ಪಡೆದ ವಿದ್ಯಾರ್ಥಿಗಳು ಅಭಿಪ್ರಾಯ ಹಂಚಿಕೊಂಡರು. 60ಕ್ಕೂ ಹೆಚ್ಚು ತರಭೇತಿ ಪಡೆದ ವಿದ್ಯಾರ್ಥಿಗಳು ಹಾಜರಿದ್ದರು.