ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಹಿಳೆಯರಿಂದ ಪೊರಕೆ ಹಿಡಿದು ಪ್ರತಿಭಟನೆ.
ಸಂಜೆವಾಣಿವಾರ್ತೆ
ಹರಪನಹಳ್ಳಿ ಏ.18; ಗ್ಯಾರಂಟಿ ಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ದ ಮಹಿಳಾ ಕಾಂಗ್ರೆಸ್ ವತಿಯಿಂದ ಪೊರಕೆ ಹಿಡಿದು ಪ್ರತಿಭಟನೆ ನಡೆಸಿದರು.
ಪಟ್ಟಣದ ಹೊಸಬಸ್ ನಿಲ್ದಾಣದ ಬಳಿ ಪೊರಕೆ ಹಿಡಿದು ಪ್ರತಿಭಟನೆ ಆರಂಭಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ ಕುಮಾರಸ್ವಾಮಿ ವಿರುದ್ದ ದಿಕ್ಕಾರ ಎಂದು ಘೋಷಣೆ ಕೂಗಿದರು.
ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ದ ಪೆಗ್ ಹಾಕುತ್ತಾರೆ ಎಂಬ ಹೇಳಿಕೆಯನ್ನು ಖಂಡಿಸಿದ ಅವರು ಮಹಿಳೆಯರಿಗೆ ಕುಮಾರಸ್ವಾಮಿ ಹಾಗೂ ಸಂಜಯ ಪಾಟೀಲ್ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕು ಎಂದು ತಾಕೀತು ಮಾಡಿದರು.
ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪುರಾತನ ಕಾಲದಿಂದಲೂ ಮಹಿಳೆಯರ ಬಗ್ಗೆ ಗೌರವ ಭಾವನೆ ಇದೆ, ಇವತ್ತಿನ ಕೆಟ್ಟ ರಾಜಕಾರಣದಲ್ಲಿ ಕುಮಾರಸ್ವಾಮಿಯವರು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದರಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದ ಅವರು ಇಂತಹ ತುಚ್ಚ ಮಾತುಗಳನ್ನಾಡಿದ ಕುಮಾರಸ್ವಾಮಿಯವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕುಮಾರಸ್ವಾಮಿಯವರು ಸ್ಪರ್ದಿಸಿರುವ ಮಂಡ್ಯ ಕ್ಷೇತ್ರದ ಮಹಿಳಾ ಮತದಾರರರು ಈ ಬಗ್ಗೆ ಚುನಾವಣೆಯಲ್ಲಿ ಅವರಿಗೆ ತಕ್ಕ ಉತ್ತರ ನೀಡಬೇಕು ಎಂದ ಅವರು ತೆನೆ ಹೊತ್ತ ಮಹಿಳೆ ಚಿಹ್ನೆ ಇಟ್ಟುಕೊಳ್ಳಲು ಜೆಡಿಎಸ್ ನವರು ಅರ್ಹರಲ್ಲಿ ಆ ಚಿಹ್ನೆಯನ್ನು ರದ್ದುಗೊಳಿಸಬೇಕೆಂದು ಅವರು ಚುನಾವಣಾ ಆಯೋಗದವರಿಗೆ ಮನವಿ ಮಾಡಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ರವರಿಗೆ ಎಷ್ಟು ಪೆಗ್ ತಗೋತಾರೆ ಎಂದು ಕೇಳುವ ಸಂಜಯ ಪಾಟೀಲ್ ಅವರು ಎಷ್ಟು ಪೆಗ್ ತಗೋತಾರೆ ಎಂದು ಅವರು ಪ್ರಶ್ನಿಸಿ ಈ ರೀತಿ ಕೀಳಾಗಿ ಮಹಿಳೆಯರ ಬಗ್ಗೆ ಮಾತನಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಹರಪನಹಳ್ಳಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಂಚಿಕೇರಿ ಜಯಲಕ್ಷ್ಮಿ, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಬಾಗ್ಯಮ್ಮ, ಮಹಿಳಾ ಕಾರ್ಯಕರ್ತರಾದ ಸುಮಾ ಜಗದೀಶ, ಉಮಾ, ಕವಿತಾ ಸುರೇಶ, ಗುಂಡಗತ್ತಿ ನೇತ್ರಾವತಿ, ಶಕುಂತಲಾ, ರೇಣುಕಾಬಾಯಿ, ಹುಲಿಗೆಮ್ಮ, ಪುμÁ್ಪ, ನಾಗರತ್ನಮ್ಮ, ನಾಗವೇಣಿ, ಗೌರಮ್ಮ, ಇದ್ದರು. ಹರಪನಹಳ್ಳಿ ಬ್ಲಾಕ್ ಕಾಂಗ್ಸೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಪುರಸಭಾ ಸದಸ್ಯ ಲಾಟಿದಾದಾಪೀರ, ಜಾಕೀರ ಹುಸೇನ್, ಮುಖಂಡರಾದ ಹೆಚ್. ಚಂದ್ರಪ್ಪ, ಉದಯಶಂಕರ, ಮತ್ತೂರು ಬಸವರಾಜ, ಎಲ್.ಮಂಜನಾಯ್ಕ, ಎನ್.ಶಂಕರ, ಇತರ ಪುರುಷ ಮುಖಂಡರು, ಕಾರ್ಯಕರ್ತರು ಪ್ರತಿಭಟನಾ ಸ್ಥಳದ ಎದುರಿಗೆ ನಿಂತು ಬಾಹ್ಯ ಬೆಂಬಲ ನೀಡಿದರು.
18ಎಚ್‍ಆರ್‍ಪಿ1: ಹರಪನಹಳ್ಳಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಪೊರಕೆ ಹಿಡಿದು ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು.