ನಾಗತಿಬಸಾಪುರ ಸಾಯಿ ಸನ್ನಿಧಿಯಲ್ಲಿ ರಾಮನವಮಿ
ಸಂಜೆವಾಣಿ ವಾರ್ತೆ
ಹೂವಿನಹಡಗಲಿ:ಎ,18-  ತಾಲೂಕಿನ ನಾಗತಿಬಸಾಪುರ ಗ್ರಾಮದ ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ರಾಮನವಮಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಶಿರಡಿ ಸಾಯಿಬಾಬಾ ಹಾಗೂ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಮನಾಮ ಜಪ, ಸಾಯಿನಾಮಾವಳಿ ಹಾಗೂ ಹನುಮಾನ್ ಚಾಲೀಸ ಪಠಿಸಲಾಯಿತು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಚನ್ನಕೇಶವನಿಗೆ ವಿಶೇಷ ಅಲಂಕಾರ : ಪಟ್ಟಣದ ಚನ್ನಕೇಶವ ದೇವಸ್ಥಾನದಲ್ಲಿ ರಾಮನವಮಿ ಅಂಗವಾಗಿ ಚನ್ನಕೇಶವ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿ ಹೂವಿನ ಅಲಂಕಾರ ಮಾಡಲಾಗಿತ್ತು. ವಾಯುಸ್ತುತಿ ಪುನಶ್ಚರಣ, ವಿಷ್ಣು ಸಹಸ್ರನಾಮ ಪಠಿಸಲಾಯಿತು. ನಂತರ ಚನ್ನಕೇಶವ, ಸೀತಾ ಲಕ್ಷ್ಮಣ ಸಹಿತ ಶ್ರೀರಾಮ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ದೇವಸ್ಥಾನ ಆವರಣಲ್ಲಿ ರಥೋತ್ಸವ ನಡೆಸಲಾಯಿತು. ಭಕ್ತರಿಗೆ ಪಾನಕ, ಕೋಸಂಬರಿ ಪ್ರಸಾದ ನೀಡಲಾಯಿತು. ಪಟ್ಟಣದ ಭಕ್ತರು ಪಾಲ್ಗೊಂಡಿದ್ದರು.