ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಗದಗ,ಏ18: ದ್ವಿತೀಯ ಪಿಯುಸಿ ಪರೀಕ್ಷೆ- 2 ಅಂತಿಮ ವೇಳಾಪಟ್ಟಿಯು ಈಗಾಗಲೇ ಪ್ರಕಟವಾಗಿದ್ದು, ಇದೇ ಏಪ್ರಿಲ್ 29 ರಿಂದ ಪರೀಕ್ಷೆ ಆರಂಭವಾಗಲಿದೆ. ಆ ನಿಟ್ಟಿನಲ್ಲಿ ಪರೀಕ್ಷೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಚಿಸಿದ್ದಾರೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ ಕೊನೆಯ ಸ್ಥಾನ ಪಡೆದಿರುವುದು ಬೇಸರ ತಂದಿದೆ. ಆದ್ದರಿಂದ ಮುಂದಿನ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಉತ್ತಮ ಫಲಿತಾಂಶ ಪಡೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎ.ರಡ್ಡೇರ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಇದ್ದರು.