ಸೆ. 22ರಂದು ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ ಸಭೆ
ಕಲಬುರಗಿ:ಸೆ.20: ಕೆಪಿಸಿಸಿ ಸತ್ಯ ಶೋಧನಾ ಸಮಿತಿ ವಿಭಾಗದ ಅಧ್ಯಕ್ಷ ಸಲೀಂ ಅಹ್ಮದ್ ಹಾಗೂ ಈ ಸಮಿತಿಯ ಸದಸ್ಯರುಗಳು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಸೆಪ್ಟೆಂಬರ್ 22ರಂದು ಸಂಜೆ 4 ಗಂಟೆಗೆ ಆಗಮಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಭೆಯನ್ನು ನಡೆಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಕಾಳಗಿ ಅವರು ತಿಳಿಸಿದ್ದಾರೆ.
ಸಭೆಗೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಎಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾಪೌರರು, ಉಪ ಮಹಾಪೌರರು ಹಾಗೂ ಹಾಲಿ ಮತ್ತು ಮಾಜಿ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಅವರು ಕೋರಿದ್ದಾರೆ.