ಶ್ರೀರಾಮನಮಿ ಆಚರಣೆ
ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಎ.18:- ಹಿಂದುಗಳ ಆರಾಧ್ಯ ದೇವ ಶ್ರೀರಾಮನ ಜನ್ಮ ದಿನಾಚರಣೆಯ ಅಂಗವಾಗಿ ಪಟ್ಟಣದ ನವನಗರ ಅರ್ಬನ್ ಕೋ ಅಪರೇಟಿವ್ ಬ್ಯಾಂಕ್ ವತಿಯಿಂದ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆಸಲ್ಲಿಸಿ ಶ್ರೀರಾಮನಮಿ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಮಜ್ಜಿಗೆ ಮತ್ತು ಪಾನಕ ವಿತರಿಸುವ ಮೂಲಕ ಆಚರಿಸಲಾಯಿತ್ತು.
ಈ ಸಂದರ್ಭದಲ್ಲಿ ನವನಗರ ಬ್ಯಾಂಕಿನ ಅಧ್ಯಕ್ಷ ಕೆ.ಎನ್.ಬಸಂತ್, ನಿವೃತ್ತ ತಂಬಾಕು ಮಂಡಳಿ ಅಧಿಕಾರಿ ಕೆ.ಎನ್.ದಿನೇಶ್, ಬ್ಯಾಂಕಿನ ವ್ಯವಸ್ಥಾಪಕ ಸುರೇಶ್, 5ಸ್ಟಾರ್ ಸುರೇಶ್, ಕಗ್ಗೆರೆ ಗಿರೀಶ್ ಮತ್ತು ಬ್ಯಾಂಕಿನ ಸಿಬ್ಬಂದಿಗಳ ಸೇರಿದಂತೆ ಇನ್ನಿತರರು ಹಾಜರಿದ್ದರು.