ಮೇ.7ರಂದು ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಲು ಡಿಸಿ ಕರೆ
ಕಲಬುರಗಿ:ಏ.17: 2024ರ ಲೋಕಸಭಾ ಚುನಾವಣೆ ಮೇ. 7 ರಂದು ಜರುಗಲಿದ್ದು, ಪ್ರತಿಯೊಬ್ಬರು ಮತದಾನ ಕಡ್ಡಾಯವಾಗಿ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಕರೆ ನೀಡಿದರು
ಬುಧವಾರದಂದು ಎನ್.ವಿ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು.
ಸ್ವೀಪ್ ಕಾರ್ಯಕ್ರಮದ ಮುಖಾಂತರ ಎಲ್ಲಾ ಜನರಲ್ಲಿ ಅರಿವು ಮೂಡಿಸುವುದು ನಾವೆಲ್ಲರೂ ಸೇರಿ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಮತದಾನ ಮಾಡುವುದು ನಮ್ಮಲ್ಲರ ಮೂಲಭೂತ ಹಕ್ಕಾಗಿದೆ ಎಂದರು.
ಮತದಾನ ಪ್ರಮಾಣ ಹೆಚ್ಚಿಸಲು ಸತತವಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳವುದರ ಮೂಲಕ ಜನರಲ್ಲಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮೇ. 7 ರಂದು ಮತದಾನ ಎಲ್ಲರೂ ತಪ್ಪದೇ ಮತದಾನ ಮಾಡಬೇಕು.ತಮ್ಮ ಮನೆಯ ಅಕ್ಕ ಪಕ್ಕ ಜನರಿಗೆ ಸಹ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಈಗಾಗಲೇ ಜಿಲ್ಲಾಪಂಚಾಯತ್ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಹಲವಾರು ಬಾರಿ ಹಮ್ಮಿಕೊಳ್ಳಲಾಗಿದೆ ಎಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿದೆ ಅಲ್ಲಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.