ತೇಜಸ್ವಿಗೆ ವಿಶ್ವಕರ್ಮರ ಬೆಂಬಲ:ಉಮೇಶ್
ಬೆಂಗಳೂರು, ಏ, ೧೭-ವಿಶ್ವಕರ್ಮ ಜನಾಂಗದ ಮೇಲೆ ಅಪಾರ ಪ್ರೀತಿ -ವಿಶ್ವಾಸ ಹೊಂದಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು ವಿಶ್ವಕರ್ಮ ಸಮುದಾಯ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಲಿದೆ ಎಂದು ಡಾ. ಬಿ. ಎಂ. ಉಮೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಜೆ.ಡಿ.ಎಸ್ ಮೈತ್ರಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರನ್ನು ಬೆಂಬಲಿಸಿ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ, ವಿಶ್ವಕರ್ಮ ನಾಡೋಜ ಡಾ. ಬಿ. ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ’ಜಾಗೃತ ಮತದಾನ ಸಮಾಲೋಚನಾ ಸಭೆ’ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಈ ಬಾರಿ ತೇಜಸ್ವಿ ಸೂರ್ಯ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ ಅವರು ಎಲ್ಲರೂ ಖಡ್ಡಾಯವಾಗಿ ಮತ ಚಲಾಯಿಸಬೇಕು. ತಮ್ಮನ್ನು ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಿಸಬೇಕು. ಸಮುದಾಯದ ಹಿತ ರಕ್ಷಣೆಗೆ ತಾವು ಬದ್ಧ ಎಂದರು.
ಬಸವನಗುಡಿ ಶಾಸಕರಾದ ರವಿ ಸುಬ್ರಮಣ್ಯ, ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಪಿ.ಎಂ ವಿಶ್ವಕರ್ಮ ಯೋಜನೆ ಸಂಚಾಲಕ ಕೆ.ಚಂದ್ರಶೇಖರ್ ಆಚಾರಿ, ಬಸವನಗುಡಿ ಜೆಡಿಎಸ್ ಅಧ್ಯಕ್ಷ ಎಂ.ರಾಜು ಮತ್ತಿತರರು ಭಾಗವಹಿಸಿದ್ದರು.