ಸೌಮ್ಯರೆಡ್ಡಿಗೆ ಗೆಲುವು ಖಚಿತ ಕೃಷ್ಣಪ್ಪ ವಿಶ್ವಾಸ
ಬೆಂಗಳೂರು, ಏ. ೧೭- ಅಭಿವೃದ್ಧಿ ಹಾಗೂ ಶಿಕ್ಷಣ ಹಾಗೂ ಪರಿಸರದ ಬಗ್ಗೆ ಅತ್ಯಂತ ಕಾಳಜಿಯನ್ನು ಹೊಂದಿರುವ ಹಾಗೂ ಜನಸಾಮಾನ್ಯರಿಗೆ ಸ್ಪಂದಿಸುವ ಸೌಮ್ಯ ರೆಡ್ಡಿ ಈ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಅವರ ಗೆಲುವು ನಿಶ್ಚಿತ ಎಂದು ಮಾಜಿ ಸಚಿವರು ಹಾಗೂ ವಿಜಯನಗರ ಕ್ಷೇತ್ರದ ಶಾಸಕರಾದ ಎಂ ಕೃಷ್ಣಪ್ಪನವರು ಇಂದು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಮತದಾರರಿಗೆ ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನು ತಿಳಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕೆಂದು ಮನವಿ ಮಾಡಿಕೊಂಡರು,
ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ ಐದು ಯೋಜನೆಗಳಿಂದ ಇಂದು ಜನರು ಅತ್ಯಂತ ನೆಮ್ಮದಿಯಿಂದ ಬದುಕುತ್ತಿದ್ದಾರೆ ಇದಕ್ಕೆ ಕಳೆದ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದದ್ದೆ ಮೂಲ ಕಾರಣ ಎಂದು ತಿಳಿಸಿದರು.
ಈ ಬಾರಿ ಸೌಮ್ಯ ರೆಡ್ಡಿ ಅವರಿಗೆ ಮತ ನೀಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಮತ್ತೆ ಐದು ಹೊಸ ಯೋಜನೆಗಳನ್ನು ಜಾರಿಗೆ ತಂದು ಜನರ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಪಂದಿಸುತ್ತದೆ ಎಂದು ವಿವರಿಸಿದರು,
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಮನೋಹರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆನಂದ್ ಕುಮಾರ್, ಸ್ಥಳೀಯ ಮುಖಂಡರಾದ ಅರ್ಜುನ್, ವಾರ್ಡ್ ಅಧ್ಯಕ್ಷರು ಮಹಿಳಾ ಕಾಂಗ್ರೆಸ್ ಮುಖಂಡರು ಮತಯಾಚನೆ ಸಂದರ್ಭದಲ್ಲಿ ಹಾಜರಿದ್ದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಅವರ ಪರವಾಗಿ ಶಾಸಕ ಎಂ. ಕೃಷ್ಣಪ್ಪನವರು ವಿಜಯನಗರ ಕ್ಷೇತ್ರದ ವಿವಿಧ ಕಡೆ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ ಕುಮಾರ್, ಮುಖಂಡರಾದ ಅರ್ಜುನ್, ಹೇಮರಾಜು ಹಾಗೂ ವಾರ್ಡ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತೆಯರು ಇದ್ದಾರೆ.