ಮಹಿಳೆಯರನ್ನು ಅವಮಾನಿಸಿದ ಹೆಚ್ಡಿಕೆವಿರುದ್ದ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.17: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನ
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾದಿಂದ, ಮಹಿಳೆಯರಿಗೆ ಆಗುತ್ತಿರುವ ಅನುಕೂಲತೆಗಳನ್ನು ನೋಡಿ ಸಹಿಸಲಾರದೆ. “ಹಳ್ಳಿ ಮಹಿಳೆಯರು ಗ್ಯಾರಂಟಿ ಯೋಜನೆಗಳಿಂದ ದಾರಿ ತಪ್ಪಿದ್ದಾರೆ” ಎಂಬ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹೆಚ್ಡಿಕೆ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್  ನೇತೃತ್ವದಲ್ಲಿ.  ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ  ಘೋಷಣೆ ಕೂಗಿ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಬರೆದ ಮನವಿ ಪತ್ರವನ್ನು  ಎಡಿಸಿ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮಹಿಳಾ ಮುಖಂಡರು,  ಲಿಡ್ಕರ್ ಅಧ್ಯಕ್ಷ  ಮುಂಡ್ರಿಗಿ ನಾಗರಾಜ್,  ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಜೆ.ಎಸ್.ಆಂಜಿನೇಯಲು, ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ  ಭೋಯಪಾಟಿ ವಿಷ್ಣು, ಬ್ಲಾಕ್ ಅಧ್ಯಕ್ಷ ಅಭಿಲಾಶ್ ಮೊದಲಾದವರು ಇದ್ದರು.