ಬಣವಿಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪತ್ನಿ ಪ್ರಚಾರ
(ಸಂಜೆವಾಣಿ ವಾರ್ತೆ)
ಬಳ್ಳಾರಿ:ಎ,17- ವಿಜಯನಗರ ಜಿಲ್ಲೆಯ  ಕೂಡ್ಲಿಗಿ ತಾಲ್ಲೂಕಿನ ಬಣವಿಕಲ್ಲು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತುಕರಾಂ  ಅವರ ಪತ್ನಿ ಅನ್ನಪೂರ್ಣ  ಅವರು ಮತಯಾಚನೆ ಮಾಡಿದರು.
ಈ ವೇಳೆ ಮಾತನಾಡಿದ ಅವರು
 ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ ಪಂಚ ಗ್ಯಾರಂಟಿಗಳ ಮಹತ್ವಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ, ಸಂವಿಧಾನಬದ್ಧ ಆಡಳಿತಕ್ಕಾಗಿ, ಸರ್ವೋದಯಕ್ಕಾಗಿ ಕಾಂಗ್ರೆಸ್ ಗೆ ಮತ ನೀಡಿ ಎಂದರು.
ಕೂಡ್ಲಿಗಿ ಪಟ್ಟಣದ ಕಾಂಗ್ರೆಸ್ ಮುಖಂಡರಾದ ಜಿಂಕಲ್ ನಾಗಮಣಿ, ಹೊಸಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಮಾರ್ ಗೌಡ,ಆಶಾಲತಾ,ಶೈಲಜಾ ನಿಕ್ಕಂ  ಮೊದಲಾದವರು  ಉಪಸ್ಥಿತರಿದ್ದರು.