ಜಾನಪದ ಸಂಸ್ಕøತಿಯ ರಕ್ಷಣೆ ಎಲ್ಲರ ಜವಾಬ್ದಾರಿ
ಕಲಬುರಗಿ:ಸೆ.20: ಶಿಷ್ಠ ಸಾಹಿತ್ಯಕ್ಕೆ ತಾಯಿಬೇರು, ಭಾರತದ ಭವ್ಯ ಪರಂಪರೆಯನ್ನು ಸಾರುವ ಜನಪದ ಸಂಸ್ಕøತಿ ಭಾರತೀಯರ ಜೀವಾಳ. ಆಧುನಿಕರಣಕ್ಕೆ ಒಳಗಾಗಿ ನಮ್ಮತನವನ್ನು ಮರೆಯದೆ, ದೇಶದ ಮೂಲ ಕಲೆ, ಸಾಹಿತ್ಯ, ಸಂಸ್ಕøತಿ, ಪರಂಪರೆಯಾದ ಜಾನಪದ ಸಂಸ್ಕøತಿಯನ್ನು ರಕ್ಷಿಸುವುದು ಎಲ್ಲರ ಜವಾಬ್ದಾರಿ. ಪ್ರತಿಯೊಬ್ಬರು ಸಂಸ್ಕøತಿ, ಪರಂಪರೆಯನ್ನು ಅಳವಡಿಸಿಕೊಂಡು ಮುಂದಿನ ಜನಾಂಗಕ್ಕೆ ವರ್ಗಾಯಿಸಿಬೇಕು ಎಂದು ಸಾಹಿತಿ ಹಾಗೂ ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಹೇಳಿದರು.
ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಮೌಲಾನಾ ಆಜಾದ ಮಾದರಿ ಶಾಲೆಯಲ್ಲಿ ‘ಕನ್ನಡ ಜಾನಪದ ಪರಿಷತ್’ನ ತಾಲೂಕಾ ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ‘ವಿಶ್ವ ಜಾನಪದ ದಿನಾಚರಣೆ’ಯನ್ನು ಉದ್ಘಾಟಸಿ ಮಾತನಾಡುತ್ತಿದ್ದರು.
ಕನ್ನಡ ಜಾನಪದ ಪರಿಷತ್‍ನ ತಾಲೂಕಾ ಘಟಕದ ಅಧ್ಯಕ್ಷ ದೇವೇಂದ್ರ ಗುಡೂರ್ ಮಾತನಾಡಿ, ಜಾನಪದ ಸಾಹಿತ್ಯ ತುಂಬಾ ಗಟ್ಟಿಯಾದದ್ದು. ಅದರಲ್ಲಿ ಮಾನವೀಯ ಮೌಲ್ಯಗಳಿವೆ. ಸುಂದರ ಬದುಕಿಗೆ ಬೇಕಾದ ಶಾಂತಿ, ಶಿಸ್ತು, ಪ್ರೀತಿ, ಪ್ರೇಮ, ಗುರು-ಹಿರಿಯರಿಗೆ ಗೌರವ ನೀಡುವ ಸಂಸ್ಕøತಿ, ವೈಜ್ಞಾನಿಕ ದೃಷ್ಠಿಕೋನ, ನೈತಿಕ ಮೌಲ್ಯಗಳು ಅಡಗಿವೆ. ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿ ಬೆಳೆಸಬೇಕು. ವಿದೇಶಿ ಸಂಸ್ಕøತಿಗೆ ಮಾರುಹೋಗದೆ, ನಮ್ಮ ದೇಶದ ಮೂಲ ಸಂಸ್ಕøತಿಯಾದ ಜಾನಪದ ಪರಂಪರೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ, ಕಜಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪಾಟೀಲ, ಶಾಲೆಯ ಪ್ರಾಂಶುಪಾಲೆ ಲಕ್ಷ್ಮೀ ಬಿ.ನಾಯಕ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.