ಮೆಹಂದಿ ಹಾಗೂ ರಂಗೋಲಿಯಲ್ಲಿ ಚಿತ್ತಾರಗೊಂಡ ಮತದಾನ ಜಾಗೃತಿ
ಧಾರವಾಡ,ಏ17: ಜಿಲ್ಲೆಯಾದ್ಯಂತ ನಡೆಯುತ್ತಿರುವ ಮತದಾರರ ಜಾಗೃತಿ ಚಟುವಟಿಕೆಗಳು ದಿನೇ ದಿನೇ ರಂಗು ಪಡೆಯುತ್ತಿವೆ. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಲ್ಲಿ ಹಾಗೂ ಹೊಸದಾಗಿ ಮತದಾನಕ್ಕೆ ಅರ್ಹತೆ ಪಡೆದುಕೊಂಡಿರುವ ಯುವ ಜನರನ್ನು ಮತದಾನಕ್ಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಸ್ವೀಪ್ ಸಮಿತಿ ನಡೆಸುತ್ತಿರುವ ವಿಶಿಷ್ಟ ಆಕರ್ಷಣೀಯ ಕಾರ್ಯಕ್ರಮಗಳು ಚುನಾವಣಾ ಹಬ್ಬದ ವಾತಾವರಣ ನಿರ್ಮಿಸುತ್ತಿವೆ. ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಲ್ಲಿ ಮತದಾನದ ಜಾಗೃತಿ ಮೂಡಿಸಲು ಮೆಹಂದಿ ಕಾರ್ಯಾಗಾರ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾಗಿತ್ತು.