ಬಸವಣ್ಣನವರ  ವಚನ ಗಾಯನ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.16 : ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಜನಸಾಮಾನ್ಯರ ಬೌದ್ಧಿಕ ಮಟ್ಟ ಹೆಚ್ಚಿಸಿ ಸಾಮಾಜಿಕ ಕ್ರಾಂತಿ ಮಾಡಿದವರು ಜಗಜ್ಯೋತಿ ಬಸವಣ್ಣನವರು ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಬಿಸಿಯೂಟ ನಿಮಿತ್ತ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಅವರ ವಚನ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಚನ ಗಾಯನ ಮಾಡಿ ನಂತರ ಮಾತನಾಡಿದ ಅವರು ಬುದ್ಧ ಬಸವ ಅಂಬೇಡ್ಕರ್ ಸಾಮಾಜಿಕ ಬದಲಾವಣೆಯ ನೇತಾರರು. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮಲತಾ  ಕಾರ್ಯಕ್ರಮ ಉದ್ಘಾಟಿಸಿದರು.
ಪ್ರತಿಭಾವಂತ ಮಕ್ಕಳಾದ ಅರುಣಜ್ಯೋತಿ,ತನುಶ್ರೀ,ಗಜೇಂದ್ರ ಹಾಗೂ ಕುರುಬರ ಶಂಕರ ಗೆ ಬಹುಮಾನ ವಿತರಿಸಲಾಯಿತು.