ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಅಧಿಕಾರಿಗಳು ಗಮನ ಹರಿಸಿ ಸಚಿವ ಶಿವಾನಂದ ಪಾಟೀಲ ಖಡಕ್ ಸೂಚನೆ
ಬಸವನಬಾಗೇವಾಡಿ:ಸೆ.20: ತಾಲ್ಲೂಕಿನ ಮನಗೂಳಿ ಸರಕಾರಿ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಕೊರತೆ ಇರುವ ಬಗ್ಗೆ ನನ್ನ ಗಮನಕ್ಕೆ ಏಕೆ ತಂದಿಲ್ಲ. ಒಟ್ಟು ತಾಲ್ಲೂಕಿನ ಪಿ.ಎಚ್.ಸಿ ಕೇಂದ್ರಗಳಲ್ಲಿ ಎಷ್ಟು ವೈದ್ಯರ ಕೊರತೆ ಇದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ನನಗೆ ಮಾಹಿತಿ ನೀಡಬೇಕು ಎಂದು ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಡಕ್ಕಾಗಿ ಸೂಚಿಸಿದರು.
ಪಟ್ಟಣದ ಪುರಸಭೆ ಸಭಾಭವನದಲ್ಲಿ ಗುರುವಾರ ಜರುಗಿದ ಅಖಂಡ ತಾಲೂಕಿನ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ.ಎಚ್.ಓ ಗುನಾರೆ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು ತಾಲ್ಲೂಕಿನ ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳಿವೆ. ತಾಲ್ಲೂಕು ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಸವiಸ್ಯೆ ಪರಿಹರಿಸುವಂತೆ ತಿಳಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಇಲಾಖೆ ವಸತಿ ಗ್ರೃಹÀಲ್ಲಿಯೇ ವಾಸಿಸಬೇಕು ಎಂದು ಸೂಚಿಸಿದರು. ತಾಲ್ಲೂಕಿನಲ್ಲಿ ಎಂ.ಸಿ.ಎಚ್ ಆಸ್ಪತ್ರೆ ಸೇರಿದಂತೆ ಹೆಚ್ಚುವರಿಯಾಗಿ ಅಂಬುಲೆನ್ಸ್ ಕಲ್ಪಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಚಿವರಿಗೆ ಮನವಿ ಮಾಡಿದರು.
ಪಟ್ಟಣದಲ್ಲಿ ಬೀದಿ ದೀಪಗಳಿಗೆ ವಾಹನಗಳು ಡಿಕ್ಕಿ ಹೊಡೆಯುತ್ತಿರುವುದರಿಂದ ಹಾನಿ ಉಂಟಾಗುತ್ತಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರೇ ಸಾಲದು. ಅಪಘಾತ ತಡೆಕಟ್ಟುವ ನಿಟ್ಟಿನಲ್ಲಿ ಹಾಗೂ ಹಾನಿಗೊಳಗಾದ ವಿದ್ಯುತ್ ಕಂಬಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಬಳೂತಿ ಮತ್ತು ಚಿಮ್ಮಲಗಿಯಲ್ಲಿ ಸರಕಾರಿ ಜಾಗೆಯ ಒತ್ತುವರಿಯಾದ ಬಗ್ಗೆ ಆರೋಪ ಕೆಳಿಬರುತ್ತಿದೆ. ಸಂಬಂಧಿಸಿದ ಅಧಿಕಾರಿಗು ಈ ಕುರಿತು ಸಂಪೂರ್ಣ ವಿವರ ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪಟ್ಟಣದಲ್ಲಿ ಕುರಿ, ದನಕರುಗಳ ಔóಷಧಿ ಅಂಗಡಿಗಳಿವೆ. ಅಂಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಅಂಗಡಿಗಳ ಪರವಾನಿಗೆ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದ ಸಚಿವರು ಅಖಂಡ ತಾಲ್ಲೂಕಿನಲ್ಲಿರುವ ಪಶು ಆಸ್ಪತ್ರೆಗಳಲ್ಲಿ ವiಧ್ಯಾಹ್ನ 3 ಗಂಟೆ ನಂತರ ವೈದ್ಯರು ಇರುವುದಿಲ್ಲ ಎಂಬ ಆರೋಪ ಕೇಳಿ ಬರತ್ತಿದೆ. ಪಶು ಸಂಜೀವಿನಿ ವಾಹನದ ಮೂಲಕ ರೈತರ ಮನೆ ಬಾಗಿಲಿಗೆ ತೆರಳಿ ಸೇವೆ ನೀಡಬೇಕು. ಆದರೆ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ತಿಳಿದುಬಂದಿದೆ. ಇದರ ಬಗ್ಗೆ ಗಮನ ಹರಿಸುವಂತೆ ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಗ್ರಾ.ಪಂ ಪಿಡಿಓ ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ಒದಗಿಸುತ್ತಿಲ್ಲ ಹಾಗೂ ಪಿಡಿಓಗಳ ಮೊಬೈಲ್ ಸ್ವಿಚ್ ಆಫ್ ಇರುತ್ತದೆ ಎಂಬ ಆರೋಪ ಕೇಳಿಬಂದಿದೆ. ಈ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚಿಸಿದರು.
ವರ್ಷಕ್ಕೆ ರೂಪಾಯಿ ಎರಡು ಕೋಟಿ ತೆರಿಗೆ ಸಂಗ್ರಹಿಸುತ್ತಿರುವ ಕೂಡಗಿ ಪಂಚಾಯತಿಯಲ್ಲಿ ಪಿಡಿಓ ನಿರ್ಲಕ್ಷದಿಂದ ಇನ್ನು ಬಯಲು ಶೌಚಾಲಯ ಜಾರಿಯಲ್ಲಿದೆ ಎಂದು ಸಚಿವರು ಕೂಡಗಿ ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡರು. ಎಲ್ಲ ಪಿಡಿಓಗಳು ರಸ್ತೆ ಬದಿಯಲ್ಲಿ ಬೆಳೆದು ನಿಂತಿರುವ ಮುಳ್ಳುಕಂಟಿ ಗಿಡಗಳನ್ನು ತೆರವುಗೊಳಿಸಬೇಕು. ಗ್ರಾಮದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ ಅವರು ಗ್ರಾಮೀಣ ಭಾಗದಲ್ಲಿ ಜನರ ಅನುಕೂಲಕ್ಕಾಗಿ ಗ್ರಾಮ ಲೆಕ್ಕಾಧಿಕಾರಿಗಳು ಮಧ್ಯಾಹ್ನ 2 ಗಂಟೆಗಳ ವರೆಗೆ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು.
ಪಟ್ಟಣದ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಖಾಸಗಿಯರು ಹೊಸ ಲೇಔಟಗಳನ್ನು ಹಾಕಿದ್ದಾರೆ. ಲೇಔಟಗಳಿಗೆ ಪರವಾನಿಗೆ ಪಡೆದುಕೊಂಡಿರುವ ಬಗ್ಗೆ ತಿಳಿದುಕೊಳ್ಳಬೇಕು. ಅನಧಿಕೃತ ಲೇಔಟಗಳು ಕಂಡು ಬಂದರೆ ಅಂತಹವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ಬಸವನಬಾಗೇವಾಡಿ ತಹಶೀಲ್ದಾರ ವೈ.ಎಸ್.ಸೋಮನಟ್ಟಿ, ನಿಡಗುಂದಿ ತಹಶೀಲ್ದಾರ ಎ.ಡಿ.ಅಮರವಾಡಗಿ, ಕೊಲ್ಹಾರ ತಹಶೀಲ್ದಾರ ಎಸ್.ಎಸ್.ನಾಯಕಲಮಠ, ಇಓಗಳಾz ಪ್ರಕಾಶ ದೇಸಾಯಿ, ವೆಂಕಟೇಶ ವಂದಾಲ, ಸುನೀಲ ಮದ್ದಿನ ಇದ್ದರು.