ಇಂಡಿ ರೈಲು ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ: 13 ಜನರಿಗೆ ಗಂಭೀರ ಗಾಯ
ಇಂಡಿ,ಸೆ.20-ಪಟ್ಟಣದ ರೈಲು ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ. ಇಂದು ಕೂಡ ಭೀಕರ ರಸ್ತೆ ಅಪಘಾತವಾಗಿ 13 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ,ಟಾಟಾ ಏಸ್, ಟಂಟಂ ವಾಹನಗಳ ಮಧ್ಯೆ ಸ್ಟೇಷನ್ ರಸ್ತೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತಕ್ಕೆ ಅತೀ ವೇಗವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಪ್ರಕರಣ ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.