ಬೆಳಿಗ್ಗೆ 6 ಗಂಟೆಯಿಂದ ಬಸ್ಸಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು
ಕೊಲ್ಹಾರ:ಸೆ.20: ಪಟ್ಟಣದಲ್ಲಿ ಸರಿಯಾಗಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಪರದಾಟ ಅಧಿಕಾರಿ ಸಿಬ್ಬಂದಿಗಳಿಗೆ ಹಿಡಿ ಶಾಪ
ಕಾಲೇಜಿಗೆ ತೆರಳಲು ಸಾರಿಗೆ ಬಸ್ಸುಗಳು ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತಾಲ್ಲೂಕಿನ ವಿದ್ಯಾರ್ಥಿಗಳು ಪರದಾಡಬೇಕಾದ ಪರಿಸ್ಥಿತಿ ಇದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸಾರಿಗೆ ಸಂಸ್ಥೆಗೂ ಶಕ್ತಿ ತುಂಬಿದೆ. ಈ ಯೋಜನೆಯಿಂದಾಗಿ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಆದಾಯದಲ್ಲೂ ಏರಿಕೆಯಾಗಿದೆ. ಆದರೆ, ಪ್ರಯಾಣಿಕರ ಅನುಗುಣವಾಗಿ ಬಸ್‍ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.