ಕಡ್ಡಾಯ ಮತದಾನಕ್ಕೆ ಕರೆ – ಡಿ.ಸಿ
ರಾಯಚೂರು,ಏ.೧೬-
ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಳ ಮಾಡುವಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರೇಖರ ನಾಯಕ ಅವರು ಹೇಳಿದರು.
ಅವರು ಏ.೧೫ರ(ಸೋಮವಾರ) ನಗರದ ನಗರಸಭೆ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ .ಜಿಲ್ಲಾ ಪಂಚಾಯತ್ . ಸ್ವೀಪ ಸಮಿತಿ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಸಹಾಯ ಗುಂಪಿನ ಮಹಿಳೆಯರಿಂದ ಮತದಾರರ ಜಾಗೃತಿ ಮತ್ತು ಕಾಲ್ನಡಿಗೆ ಜಾಥಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎಂಬುವುದು ಅತ್ಯಂತ ಮುಖ್ಯವಾಗಿರುತ್ತದೆ. ಆದ್ದರಿಂದ ಪ್ರಜಾಪ್ರಭುತ್ವವನ್ನು ಗೆಲ್ಲಿಸಲು ಪ್ರತಿಯೊಬ್ಬ ಅಹ ಮತದಾರರು ಮತದಾನ ಮಾಡುವುದು ಕಡ್ಡಾಯವಾಗಿದ್ದು, ಮೇ.೭ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ತುಕಾರಾಮ ಪಾಂಡ್ವೆ. ನಗರಸಭೆಯ ಪೌರಾ ಯುಕ್ತ ಜಿ.ಎನ್ ಚಲಪತಿ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ಮತದಾರರ ಸಾಕ್ಷರತಾ ಕ್ಲಬ್‌ನ ದಂಡಪ್ಪ ಬಿರಾದಾರ, ನಗರಸಭೆ ಅಧಿಕಾರಿಗಳು ಹಾಗು ಸಿಬ್ಬಂದಿ ಸೇರಿದಂತೆ ಉಪಸ್ಥಿತರಿದ್ದರು. ನಗರ ಸಭೆಯಿಂದ ಪ್ರಾರಂಭವಾದ ಕಾಲ್ನಡಿಗೆ ಜಾತ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರ್ಪಡೆಯನ್ನು ರಚನೆ ಮಾಡಿ ಜಾಗೃತಿ ಮೂಡಿಸಲಾಯಿತು.