ಅಂಬೇಡ್ಕರ್ ಜಯಂತ್ಯೋತ್ಸವ ಮೆರವಣಿಗೆ ವೇಳೆ ಯುವಕನ ಕೊಲೆ
ಕಲಬುರಗಿ,ಏ.15-ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಮೆರವಣಿಗೆ ವೇಳೆ ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಗರದ ಜೇವರ್ಗಿ ಕ್ರಾಸ್ ಹತ್ತಿರ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ಅಶೋಕ ನಗರದ ಆಕಾಶ್ ತಂದೆ ಆಂಜನೇಯ (26) ಕೊಲೆಯಾದ ಯುವಕ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಅದ್ದೂರಿ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಆಕಾಶ್‍ನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ಆಕಾಶ್‍ನನ್ನು ಅಲ್ಲಿದ್ದವರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿಯೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.