ತಹಶೀಲ್ದಾರ್ ಕಚೇರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಕೊಲ್ಹಾರ: ಏ.15:ಅಂಬೇಡ್ಕರ್ ಅವರು, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಮಾಡಿದ ಸಾಧನೆ ಅನನ್ಯ ಸಮಾನತೆ ಮತ್ತು ಮಾನವೀಯತೆಯನ್ನು ಗೌರವಿಸುವ ಅವರ ಚಿಂತನೆ ಎಲ್ಲರಿಗೂ ಆದರ್ಶವಾದುದು ಎಂದು ತಹಶೀಲ್ದಾರ್ ಎಸ್ ಎಸ್ ನಾಯಕಲಮಠ ಹೇಳಿದರು
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು
ಭಾರತ ದೇಶಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು. ಶತಮಾನಗಳ ಕಾಲ ಶಾಶ್ವತವಾಗಿ ಉಳಿಯುವಂತ ಸಂವಿಧಾನ ನಮ್ಮದಾಗಿದೆ. ಪ್ರತಿಯೊಬ್ಬರೂ ಅಂಬೇಡ್ಕರ್ ರವರ ಸಿದ್ದಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಡತನದಲ್ಲಿ ಹುಟ್ಟಿ ಪ್ರಪಂಚವೇ ತಿರುಗಿ ನೋಡುವಂತೆ, ದೇಶವೇ ಹೆಮ್ಮೆ ಪಡುವಂತೆ ಎತ್ತರಕ್ಕೆ ಬೆಳೆದವರು ಅಂಬೇಡ್ಕರ್. ಇವರು ನೀಡಿರುವ ಸಂವಿಧಾನದಿಂದಲೇ ದೇಶವು ಇಂದಿಗೂ ಸುಭೀಕ್ಷವಾಗಿ, ನ್ಯಾಯಯುತವಾಗಿ ಸಾಗುತ್ತಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಮನು ಪತ್ತಾರ್ ಮಾತನಾಡಿ,ಭಾರತ ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪಾತ್ರ ಬಹಳ ಮುಖ್ಯವಾಗಿದ್ದು, ಸಂವಿಧಾನದಲ್ಲಿರುವ ತತ್ವಗಳನ್ನು ನಮ್ಮ ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ಶ್ರೀಶೈಲ ಮುಳವಾಡ,ಡಿ.ಎಸ್.ಎಸ್ ಅಧ್ಯಕ್ಷ ದಶರಥ ಈಟಿ ಅಲ್ಲಾಭಕ್ಷ ಬಿಜಾಪುರ ತೌಸಿಪ್ ಗಿರಗಾಂವಿ ರಾಜು ಇವಣಗಿ,ಪರಶುರಾಮ ಚಿಮ್ಮಲಗಿ ತಿಪ್ಪಣ್ಣ ಕುದರಿ, ಸಿಡ್ಲಪ್ಪ ತಳಗೇರಿ,ಉಮೇಶ ಬ್ಯಾಲ್ಯಾಳ ಸಹಿತ ಅನೇಕರು ಉಪಸ್ಥಿತರಿದ್ದರು