ಕುಮಾರಸ್ವಾಮಿ ಕ್ಷಮೆ ಯಾಚಿಸಲಿ: ಕಾಂತಾ ನಾಯಕ
ವಿಜಯಪುರ,ಏ.15:ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತಿ ್ರಕುಮಾರಸ್ವಾಮಿಯವರ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಅಪಮಾನ ಮಾಡುವಂತದ್ದು, ಈ ಕೂಡಲÉ ಅವರು ಮತ್ತು ಎನ್‍ಡಿಎ ಮೈತ್ರಿಕೂಟ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಹೆಣ್ಣು ಮಕ್ಕಳು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಪ್ರತಿ ತಿಂಗಳು ನೀಡುವ 2 ಸಾವಿರ ಎಷ್ಟೋ ತಾಯಂದಿರ ಮಕ್ಕಳ ವಿದ್ಯಾಭ್ಯಾಸಕ್ಕೆ ಆಧಾರವಾಗಿದೆ. ನಮ್ಮ ಸರ್ಕಾರ ಮಹಿಳೆಯರಿಗೆ ಬದುಕು ಕಟ್ಟಿಕೊಳ್ಳಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವ ಮೂಲಕ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕನ್ನು ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.