ಸಚಿವ ಎಂ.ಬಿ. ಪಾಟೀಲ ಅಂಬೇಡ್ಕರ್ ಪ್ರತಿಮೆಗೆ ಗೌರವಾರ್ಪಣೆ
ವಿಜಯಪುರ,ಏ.15: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್‍ಅವರ 133ನೇ ಜನ್ಮದಿನದ ಅಂಗವಾಗಿ ಬೃಹತ್À ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಭಾನುವಾರ ನಗರದ ಅಂಬೇಡ್ಕರ್ ಚೌಕಿಗೆ ತೆರಳಿದ ಸಚಿವರು, ಜಯಂತಿ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ರಾಜು ಆಲಗೂರ, ಶಹಜಹಾನ್ ಮುಲ್ಲಾ, ಅಡಿವೆಪ್ಪ ಸಾಲಗಲ್ ಮುಂತಾದವರು ಉಪಸ್ಥಿತರಿದ್ದರು.