ಜಾತ್ರಾ ಮಹೋತ್ಸವ
ಹುಬ್ಬಳ್ಳಿ,ಏ15: ಇಲ್ಲಿನ ಬಿಡನಾಳ ಶ್ರೀ ಹನುಮಂತ(ಮಾರುತಿ)ದೇವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ಏ.16 ರಿಂದ 24ರ ವರೆಗೆ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಏ.16 ರಿಂದ 22ರ ವರೆಗೆ ಪ್ರತಿದಿನ ಸಂಜೆ 7:00 ಗಂಟೆಗೆ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಕಾಲೋನಿ ಶಂಕ್ರಪ್ಪ ಅಡವಿ ಅವರ ಜಮೀನಿನಲ್ಲಿ ಮಣಕವಾಡ ಅನ್ನದಾನೇಶ್ವರ ಮಠದ ಶ್ರೀ ಅಭಿನವ ಮೃತ್ಯುಂಜಯ ಸ್ವಾಮೀಜಿ ಅವರಿಂದ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ.
19 ರಂದು ಬೆಳಿಗ್ಗೆ ಬ್ರಾಹ್ಮಿ ಮುಹೋರ್ತದಲ್ಲಿ ಗ್ರಾಮದೇವತೆ ಶ್ರೀ ಮರಗಮ್ಮ ದೇವಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. 22 ರಂದು ಸಂಜೆ 7:00 ಗಂಟೆಗೆ ಪ್ರವಚನ ಮಂಗಲ ಕಾರ್ಯಕ್ರಮ ನಡೆಯಲಿದೆ.
23 ರಂದು ಬೆಳಿಗ್ಗೆ ಬ್ರಾಹ್ಮಿ ಮುಹೋರ್ತದಲ್ಲಿ ಹನುಮಂತ ದೇವರ ತೊಟ್ಟಿಲೋತ್ಸವ, ನಂತರ ಹೋಮ ಹಾಗೂ ಸಂಜೆ 5:15 ಗಂಟೆಗೆ ಹನುಮಂತ ದೇವರ ರಥೋತ್ಸವ ನಡೆಯಲಿದೆ. ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. 24 ರಂದು ಬೆಳಿಗ್ಗೆ 11:00 ಗಂಟೆಗೆ ಮಹಿಳೆಯರಿಂದ ವಿಶೇಷ ರಥೋತ್ಸವಕ್ಕೆ ಚಾಲನೆ ಕಾರ್ಯಕ್ರಮ ನಡೆಯಲಿದೆ.
ಮೂರುಸಾವಿರಮಠದ ಜಗದ್ಗುರು ಡಾ.ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಮಧ್ಯಾಹ್ನ 12:30 ಮಹಾಪ್ರಸಾದ ಮೂಲಕ ಜಾತ್ರಾ ಮಹೋತ್ಸವ ಸಂಪನ್ನವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.