ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಆಚರಣೆ
ಬೀದರ, ಏ.15ಃ ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ 133 ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ರಚಿಸಿದ ಸಂವಿಧಾನವನ್ನು ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಭಗವಂತ ಖೂಬಾ ಅವರು ಮಾತನಾಡಿ, ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಅರ್.ಅಂಬೇಡ್ಕರ ಅವರು ಬರೆದ ಸಂವಿಧಾನದಿಂದ ದೇಶದಲ್ಲಿ ಎಲ್ಲಾ ಜನಾಂಗದವರಿಗೆ ಅಧಿಕಾರ ಸಿಗುತ್ತಿದೆ ಎಂದು ಹೇಳಿದರು.
ಬೀದರ ದಕ್ಷಿಣ ಶಾಸಕ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಯಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರು ಬರೆದ ಸಂವಿಧಾನದಲ್ಲಿ ಎಲ್ಲಾ ಜನಾಂಗದವರಿಗೆ ನ್ಯಾಯವನ್ನು ಒದಗಿಸಲಾಗಿದೆ ಎಂದು ನುಡಿದರು.
ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ ಮಲ್ಕಾಪೂರೆ ಅವರು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ ಅವರ ಬರೆದ ಸಂವಿಧಾನದಿಂದಲೇ ದೇಶದ ಒಬ್ಬ ಸಾಮಾನ್ಯ ಪ್ರಜೆಯೂ ಕೂಡ ಪ್ರಧಾನ ಮಂತ್ರಿಯಾಗಬಹುದು. ಈ ಅವಕಾಶವನ್ನು ನಮ್ಮ ಸಂವಿಧಾನದಲ್ಲಿ ಒದಗಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಪರಿಶಿಷ್ಟ ಘಟಕದ ಕಾರ್ಯದರ್ಶಿ ಜೈಕುಮಾರ ಕಾಂಗೆ, ಬೀದರ ಲೋಕ ಸಭಾ ಕ್ಷೇತ್ರದ ಪ್ರಭಾರಿ ಅರಹಂತ ಸಾವಳೆ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ರಾಜಶೇಖರ ನಾಗಮೂರ್ತಿ, ಕಲಬುರಗಿ ವಿಭಾಗದ ಸಹ ಸಂಘಟನಾ ಪ್ರಭಾರಿ ಈಶ್ವರಸಿಂಗ್ ಠಾಕೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಯರನಳ್ಳಿ, ಕಿರಣ ಪಾಟೀಲ, ಮಾಧವರಾವ ಹುಸೂರೆ, ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಗಜೇಂದ್ರ ಕನಕಟಕರ್,ಕಾರ್ಯಾಲಯ ಕಾರ್ಯದರ್ಶಿ ರಾಜಕುಮಾರ ಪಾಟೀಲ ನೆಮತಾಬಾದ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಲುಂಬಾಣಿ ಗೌತಮ, ಯೋಗೇಶ್ವರಿ, ಸೋನ್ ಕಾಂಬಳೆ, ಮಹಾನಂದಾ ಪಾಟೀಲ, ಸರಸ್ವತಿ ಹೇಮಶೆಟ್ಟಿ, ಶೋಭಾ ತೆಲಂಗ್, ರೂಪವತಿ ಜಾಧವ, ಬಸವರಾಜ ಆರ್ಯ, ಶಶಿ ಹೊಸಳ್ಳಿ, ರಾಜೇಂದ್ರ ಪೂಜಾರಿ, ಗಣೇಶ ಭೋಸ್ಲೆ, ಸುಭಾಷ ಮಡಿವಾಳ, ನವೀನ ಚಿಟ್ಟಾ, ಗುರುನಾಥ ಜಾಂತಿಕರ್, ರಾಜರೆಡ್ಡಿ ಶಹಾಬಾದೆ, ರಾಮಶೆಟ್ಟಿ ಪನ್ನಾಳೆ, ಅಶೋಕ ಹೋಕಾರೆ, ಅರವಿಂದ ಮುತ್ಯಾ, ವೀರಣ್ಣಾ ಕಾರಬಾರಿ, ಪ್ರಭಾಕರ ನಾಗರಾಳೆ, ಬಾಬುರಾವ ಕಾರಬಾರಿ, ಅನೀಲ ಭೂಸಾರೆ, ಶಿವರಾಜ ಗಂದಗೆ, ಶ್ರೀನಿವಾಸ ಚೌಧರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಂತರ ಬೀದರಿನ ನೌಬಾದನಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಹುಡಗಿ ಹಾಗೂ ಇತರ ಪದಾಧಿಕಾರಿಗಳಿಂದ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.