ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ಧಾರವಾಡ,ಏ.15: ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಮಹಾನಗರ ಪೆÇಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುμÁ್ಪರ್ಪಣೆ ಮಾಡಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಸರ್ವರಿಗೂ, ಮಹಾನ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯ ಶುಭಾಶಯ ಕೋರಿದರು.
ಬುದ್ದ ರಕ್ಕಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭಾ ಅವರು ಸ್ವಾಗತಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಜಿಲ್ಲಾ ನಗರಾಭಿವೃದ್ದೀಕೋಶದ ಯೋಜನಾ ನಿರ್ದೇಶಕ ರಮೇಶ ಬಿ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾವತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಮಾಜದ ಮುಖಂಡರಾದ ಸುಶೀಲಮ್ಮಾ ಚಲವಾದಿ, ಮಾಲಾ ತುರಿಹಾಳ್ , ಕಲ್ಮೇಶ ಹಾದಿಮನಿ , ಅಶೋಕ್ ದೊಡ್ಡಮನಿ ಸೇರಿದಂತೆ ಇತರ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.