ಸಂಜೆ ಅಂಬೇಡ್ಕರ್ಪ್ರಶಸ್ತಿ ಪ್ರದಾನ
ಬೆಂಗಳೂರು, ಏ. ೧೫- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಇಂದು ಪುಟ್ಟಣ್ಣಚೆಟ್ಟಿ ಪುರಭವನ(ಟೌನ್ ಹಾಲ್) ಸಭಾಂಗಣದಲ್ಲಿ ಸಂಜೆ ೫ಗಂಟೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ೧೩೩ನೇ ಜನ್ಮ ದಿನಾಚರಣೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕ/ಸಾಧಕಿಯರಿಗೆ ಮತ್ತು ಬಿಬಿಎಂಪಿ ಅಧಿಕಾರಿ, ನೌಕರರಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ಅಧ್ಯಕ್ಷರಾದ ಎ.ಅಮೃತ್ ರಾಜ್ ರವರ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ೧೩೩ನೇ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಉದ್ಘಾಟನೆಯನ್ನು ಮಾನ್ಯ ನ್ಯಾಯಮೂರ್ತಿಗಳಾದ ಶ್ರೀ ಆರ್.ದೇವದಾಸ್ ರವರು, ಅಧ್ಯಕ್ಷತೆಯನ್ನು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಮುಖ್ಯ ಅತಿಥಿಗಳಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ರವರು, ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಎನ್.ಸತೀಶ್ ಕುಮಾರ್, ಸಚಿವಾಲಯ ನೌಕರರ ಸಂಘ ಅಧ್ಯಕ್ಷರಾದ ರಮೇಶ್ ಸಂಘ ಮತ್ತು ಸುಮಂಗಲಿ ಸೇವಾ ಆಶ್ರಮದ ಅಧ್ಯಕ್ಷೆ ಡಾ.ಎಸ್.ಜಿ.ಸುಶೀಲಮ್ಮ, ಚಲನಚಿತ್ರ ನಟರಾದ ಶರಣ್, ಬಿಬಿಎಂಪಿ ಕಂದಾಯ ವಿಭಾಗ ಜಂಟಿ ಆಯುಕ್ತರಾದ ಶ್ರೀಮತಿ ಲಕ್ಷ್ಮಿದೇವಿರವರು ಉದ್ಘಾಟನೆ ನೇರವೇರಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.