ಜಗತ್ ವೃತ್ತದಲ್ಲಿ ಸಂವಿಧಾನ ಶಿಲ್ಪಿಗೆ ಜಿಲ್ಲಾಡಳಿತದಿಂದ ಗೌರವ ನಮನ ಸಲ್ಲಿಕೆ
ಕಲಬುರಗಿ: ಏ.14 : ಜಿಲ್ಲಾಡಳಿತ, ಜಿಲ್ಲಾಪಂಚಾಯತ,. ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು 133ನೇ ಜಯಂತಿ ಅಂಗವಾಗಿ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಪ್ರತಿಮೆಗೆ ಭಾನುವಾರದಂದು ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಮತ್ತು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಸೇರಿದಂತೆ ಹಿರಿಯ ಅಧಿಕಾರಿಗಳು ಪುಷ್ಫಾರ್ಚನೆ ಮಾಡಿ ಗೌರವ ನವನ ಸಲ್ಲಿಸಿದರು.
ಇದಕ್ಕೂ ಮುನ್ನ ಬುದ್ಧ ವಿಹಾರದ ಪೂಜ್ಯ ಸಂಗಾನಂದ ಭಂತೇಜಿ ಅವರ ನೇತೃತ್ವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿ ಬುದ್ಧವಂದನೆ ಸಲ್ಲಿಸಲಾಯಿತು.
ನಗರ ಪೊಲೀಸ ಆಯುಕ್ತ ಚೇತನ್ ಆರ್. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೈ, ಜಿಲ್ಲಾ ಪಂಚಾಯತ್ ಸಿ.ಇ.ಓ. ಭಂವರಸಿಂಗ್ ಮೀನಾ, ಮಹಾನಗರ ಪಾಲಿಕೆಯ ಆಯುಕ್ತರಾದ ಭುವನೇಶ್ ದೇವಿದಾಸ ಪಾಟೀಲ, ಉಪಆಯುಕ್ತರಾದ ಮಾಧವ ಗಿತ್ತೆ, ಕಲಬುರಗಿ ಸಹಾಯಕ ಆಯುಕ್ತೆ ರೂಪಿಂದ್ರ ಸಿಂಗ್ ಕೌರ್, ಸಮಾಜ ಕಲ್ಯಾಣ ಇಲಾಖೆ (ಪ್ರ) ಅಧಿಕಾರಿ ಜಾವಿದ್ ಕರಂಗಿ, ಜಯಂತ್ಯೋತ್ಸವ ಸಮಿತಿ ಅಧ್ಯಕ್ಷರಾದ ರಾಜು ಸಂಕ, ಎಸ್‍ಸಿ/ಎಸ್‍ಟಿ ಸರಕಾರಿ ಅರೆ ಸರಕಾರಿ ನೌಕರರ ಸಂಘದ ಅಧ್ಯಕ್ಷರ ಸೋಮಶೇಖರ ಎಸ್ ಮದನಕರ್, ವಿಠ್ಠಲ ಗೋಳಾ, ಸಮಾಜದ ಮುಖಂಡರಾದ ಡಿ.ಜಿ. ಸಾಗರ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಪಂಚಶೀಲ ಧ್ವಜಾರೋಹಣ ನೇರವೇರಿಸಿದರು. ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ನೀಲ ಧ್ವಜಾರೋಹಣ ನೇರವೇರಿಸಿದರು.